ಪದ್ಮಶ್ರೀ ಪುರಸ್ಕೃತ ಸಾಲುಮರದ ತಿಮ್ಮಕ್ಕ ನಿಧನ
ಬೆಂಗಳೂರು: ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಪದ್ಮಶ್ರೀ ಪುರಸ್ಕೃತರಾದ ಸಾಲುಮರದ ತಿಮ್ಮಕ್ಕ (114) ನಿಧನರಾಗಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು ಮಧ್ಯಾಹ್ನ ನಿಧನ ಹೊಂದಿದ್ದಾರೆ ಎಂದು ತಿಳಿದು ಬಂದಿದೆ.
ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನಲ್ಲಿ 1911ರ ಜೂನ್ 30ರಂದು ಜನಿಸಿದ್ದ ಸಾಲುಮರದ ತಿಮ್ಮಕ್ಕರವರಿಗೆ ಮಕ್ಕಳಿರಲಿಲ್ಲ. ಹೀಗಾಗಿ ತಮಗೆ ಮಕ್ಕಳಿರದ ದುಃಖವನ್ನು ಮರೆಯಲು ರಸ್ತೆಯ ಬದಿಯಲ್ಲಿ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದ್ದರು. ಸಾಲು ಮರದ ತಿಮ್ಮಕ್ಕ ಎಂದೇ ಪ್ರಸಿದ್ಧರಾಗಿದ್ದ ಇವರಿಗೆ 2019ರಲ್ಲಿ ಪದ್ಮಶ್ರೀ ಲಭಿಸಿತ್ತು.





