ಕರಾವಳಿ

ಮಧುರಾ ಇಂಟರ್ನ್ಯಾಷನಲ್ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಸಂಭ್ರಮ

ಪುತ್ತೂರು: ಮಧುರಾ ಇಂಟರ್ನ್ಯಾಷನಲ್ ಸ್ಕೂಲ್‌ನಲ್ಲಿ ನ.14ರಂದು, ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರ ಜನ್ಮದಿನದ ಅಂಗವಾಗಿ ಮಕ್ಕಳ ದಿನಾಚರಣೆಯನ್ನು ವೈಭವದಿಂದ ಆಚರಿಸಲಾಯಿತು.

ಮುಖ್ಯೋಪಾಧ್ಯಾಯಿನಿ ಪುಷ್ಪಲತಾ ರಾವ್ ಅವರ ಪ್ರಾರ್ಥನೆಯೊಂದಿಗೆ ಆರಂಭವಾಯಿತು. ಶಾಲಾ ನಾಯಕಿ ಫಾತಿಮತ್ ಮುನಾ ಹಾಗೂ ಶಾಲೆಯ ಅತೀ ಕಿರಿಯ ವಿದ್ಯಾರ್ಥಿನಿ ಕುಮಾರಿ ಲಿಜಾ ಅವರು ಹೂಗಿಡಕ್ಕೆ ನೀರುಣಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.


ದೈಹಿಕ ಶಿಕ್ಷಣ ಶಿಕ್ಷಕಿ ಚಿತ್ರಾ ಪ್ರಾಸ್ತಾವಿಕವಾಗಿ ಮಾತನಾಡಿ ಮಕ್ಕಳ ದಿನಾಚರಣೆಯ ಮಹತ್ವವನ್ನು ವಿವರಿಸಿದರು.
ಶಿಕ್ಷಕಿ ಲಿಕ್ಷಿತಾ ಸ್ವಾಗತಿಸಿ ಉಮ್ಮುಳುರ ಅವರು ವಂದಿಸಿದರು. ಶಿಕ್ಷಕಿ ಜಹೀರಾ ಶೇಖ್ ಕಾರ್ಯಕ್ರಮ ನಿರ್ವಹಿಸಿದರು.
ವೇದಿಕೆಯಲ್ಲಿ ಆಡಳಿತಾಧಿಕಾರಿ ಅಬ್ದುಲ್ ರಹಿಮಾನ್, ಮ್ಯಾನೇಜರ್ ಖದೀಜತ್ ರೈಹಾನ ಉಪಸ್ಥಿತರಿದ್ದರು.

ಶಿಕ್ಷಕಿಯರು ಮಕ್ಕಳಿಗೆ ಉಡುಗೊರೆಗಳನ್ನು ನೀಡುವುದರ ಮೂಲಕ ಅವರನ್ನು ಹುರಿದುಂಬಿಸಿದರು.
ಈ ಸಂದರ್ಭದಲ್ಲಿ ಅಡ್ಮಿನ್ ಆಫೀಸರ್ ನಾಸಿರ್, ಶಿಕ್ಷಕವೃಂದ ಮತ್ತು ಶಿಕ್ಷಕೇತರ ಸಿಬ್ಬಂದಿ ಸಹ ಪಾಲ್ಗೊಂಡಿದ್ದರು.
ದಿನವಿಡೀ ನಡೆದ ವಿವಿಧ ಮನರಂಜನಾ ಕಾರ್ಯಕ್ರಮಗಳಲ್ಲಿ ಮಕ್ಕಳು ಸಂತಸದಿಂದ ಭಾಗವಹಿಸಿದರು.

Leave a Reply

Your email address will not be published. Required fields are marked *

error: Content is protected !!