ಬಿಸಿ ರೋಡ್ ಭೀಕರ ಅಪಘಾತ, ಮೂವರು ಮೃತ್ಯು
ಬಂಟ್ವಾಳ: ಕಾರು ಅಪಘಾತದಲ್ಲಿ ಮೂವರು ಮೃತಪಟ್ಟು ಆರು ಮಂದಿ ಗಾಯಗೊಂಡ ಘಟನೆ ನ.15ರಂದು ಮುಂಜಾನೆ ಬಿಸಿ ರೋಡ್ ನಲ್ಲಿ ನಡೆದಿದೆ.

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ, ಬೆಂಗಳೂರು ಕಡೆಯಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಇನ್ನೋವಾ ಕಾರು, ಚಾಲಕನ ನಿಯಂತ್ರಣ ತಪ್ಪಿ ಬಂಟ್ವಾಳ ಬಿ.ಸಿ. ರೋಡ್ ಬಳಿ, ನಾರಾಯಣ ಗುರು ವೃತ್ತಕ್ಕೆ ಡಿಕ್ಕಿಯಾಗಿದೆ. ಅಪಘಾತದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ 9 ಜನರ ಪೈಕಿ, ಬೆಂಗಳೂರು ನಿವಾಸಿಗಳಾದ ರವಿ (64), ನಂಜಮ್ಮ (75), ರಮ್ಯಾ.(23) ಎಂಬವರುಗಳು ಮೃತಪಟ್ಟಿದ್ದಾರೆ.
ಗಾಯಾಳುಗಳಾದ ಸುಶೀಲ, ಕೀರ್ತಿ ಕುಮಾರ್, ಕಿರಣ್, ಬಿಂದು, ಪ್ರಶಾಂತ್ ಹಾಗೂ ಚಾಲಕ ಸುಬ್ರಹ್ಮಣ್ಯ ಸೇರಿದಂತೆ ಉಳಿದ 6 ಜನರು ರವರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿರುತ್ತದೆ. ವಾಹನದಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ಸಂಬಂಧಿಕರಾಗಿದ್ದು, ಪ್ರಕರಣದ ಬಗ್ಗೆ ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಅ.ಕ್ರ:151/25, ಕಲಂ: 281,125A, 106 BNS ರಂತೆ ಪ್ರಕರಣ ದಾಖಲಿಸಲಾಗಿದೆ.





