ಪುತ್ತೂರು: ಮಾದಕ ವಸ್ತು MDMA ಮಾರಾಟಕ್ಕೆ ಯತ್ನ, ಆರೋಪಿಯ ಬಂಧನ
ಪುತ್ತೂರು: ಪುತ್ತೂರು ನಗರ ಠಾಣಾ ವ್ಯಾಪ್ತಿಯ ಕೆಮ್ಮಿಂಜೆ ಗ್ರಾಮದ, ಮುಕ್ರಂಪಾಡಿ ಬಳಿ ಬಾಡಿಗೆ ಕೋಣೆಯಲ್ಲಿ ಅಕ್ರಮವಾಗಿ ನಿಷೇದಿತ ಮಾದಕ ವಸ್ತು MDMA ನ್ನು ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ, , ಪುತ್ತೂರು ನಗರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಜನಾರ್ಧನ ಕೆ.ಎಂ ಅವರು ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರೀಶಿಲಿಸಿದಾಗ, ಸದ್ರಿ ಬಾಡಿಗೆ ಕೋಣೆಯಲ್ಲಿ ಆರೋಪಿ ಮಹಮ್ಮದ್ ಮುಸ್ತಾಫ ಎಂಬಾತನು ಅಕ್ರಮವಾಗಿ 14 ಗ್ರಾಂ ನಿಷೇದಿತ ಮಾದಕ ಮನೋನ್ಮಾದಕ ವಸ್ತು MDMA ನ್ನು ತನ್ನ ಬಳಿ ಇಟ್ಟುಕೊಂಡು ಮಾರಾಟ ಮಾಡುತ್ತಿರುವುದು ಕಂಡುಬಂದಿದೆ.

ಈ ಬಗ್ಗೆ ಆರೋಪಿ ಪುತ್ತೂರು ಕಬಕ ನಿವಾಸಿ ಮಹಮ್ಮದ್ ಮುಸ್ತಪಾ (36) ಎಂಬಾತನ ವಿರುದ್ದ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 109/2025 ಕಲಂ;- 8(C),22(b) NDPS ಕಾಯ್ದೆಯಂತೆ ಪ್ರಕರಣ ದಾಖಲಿಸಲಾಗಿದೆ.
ಆರೋಪಿ ಮಹಮ್ಮದ್ ಮುಸ್ತಪಾ ವಿರುದ್ಧ ಈಗಾಗಲೇ,
ಪುತ್ತೂರು ನಗರ ಠಾಣೆಯಲ್ಲಿ ಅಕ್ರ:141/2015 ಪೋಕ್ಸೊ ಪ್ರಕರಣ ದಾಖಲಾಗಿ, ಸದ್ರಿ ಪ್ರಕರಣದಲ್ಲಿ ಮೂರು ವರ್ಷ ಜೈಲು ಶಿಕ್ಷೆ ವಿಧಿಸಲಾಗಿರುತ್ತದೆ. ಪುತ್ತೂರು ನಗರ ಠಾಣೆಯಲ್ಲಿ ಅ.ಕ್ರ 48/2024, 108/2024 ರಲ್ಲಿ ಮಾದಕವಸ್ತು ಮಾರಾಟದ ಪ್ರಕರಣಗಳು ದಾಖಲಾಗಿದೆ.





