ಉಪ್ಪಿನಂಗಡಿ ಮಾದಕ ವಸ್ತು ಸೇವನೆ ಹಾಗೂ ಮಾರಾಟ ಪ್ರಕರಣ: ಮೂವರು ಆರೋಪಿಗಳಿಗೆ ಶಿಕ್ಷೆ
ಉಪ್ಪಿನಂಗಡಿ: ಮಾದಕ ವಸ್ತು ಸೇವನೆ ಹಾಗೂ ಮಾರಾಟ ಪ್ರಕರಣಕ್ಕೆ ಸಂಬಂಧಿಸಿ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ಶಿಕ್ಷೆ ಪ್ರಕಟಗೊಂಡಿದೆ.

ಉಪ್ಪಿನಂಗಡಿ ಠಾಣಾ ಪೊಲೀಸ್ ಉಪನಿರೀಕ್ಷಕರಾಗಿದ್ದ ರಾಜೇಶ್ ರವರು ತನಿಖೆ ನಡೆಸಿ, ಅಗತ್ಯ ಸಾಕ್ಷಿಗಳನ್ನು ಕಲೆಹಾಕಿ ಪ್ರಕರಣದ ಆರೋಪಿಗಳಾದ ಸಲೀಂ ಹುಸೇನ್, ಶಹಜ್ ಅಹಮದ್ ಹಾಗೂ ಮಹಮದ್ ಶಾಫಿ ಎಂಬವರ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ್ದಾರೆ. ಈ ಬಗ್ಗೆ ವಿಚಾರಣೆ ನಡೆಸಿದ ಪಿ ಎಸ್ ಸಿ ಜೆ ಮತ್ತು ಜೆ ಎಂ ಎಫ್ ಸಿ ನ್ಯಾಯಾಲಯ ಬೆಳ್ತಂಗಡಿ ರವರು ವಿಚಾರಣೆ ನಡೆಸಿ, ಆರೋಪಿಗಳ ಮೇಲಿನ ಆರೋಪವು ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗಳಿಗೆ,
ಕಲಂ 27(B) ಅಡಿಯಲ್ಲಿ ರೂ 10000 ದಂಡ ಮತ್ತು ಒಂದು ವರ್ಷ ಸಾದಾ ಕಾರಾಗೃಹ ಶಿಕ್ಷೆ, ಕಲಂ 20(B)(ii)(A) ಅಡಿಯಲ್ಲಿ 10000, ರೂಪಾಯಿ ದಂಡ ಮತ್ತು ಒಂದು ವರ್ಷ ಸಾದಾ ಕಾರಾಗೃಹ ಶಿಕ್ಷೆ ನೀಡಿ ಅದೇಶಿಸಿದೆ.
ಸರ್ಕಾರದ ಪರವಾಗಿ ಸಹಾಯಕ ಅಭಿಯೋಜಕರಾದ ದಿವ್ಯರಾಜ ಹೆಗ್ಡೆ ವಾದ ಮಂಡಿಸಿದ್ದಾರೆ.



