ಕರಾವಳಿ

ವಿಸ್ಡಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರತಿಭಾ ಕಾರಂಜಿ

ಬಂಟ್ವಾಳ: ವಿಸ್ಡಮ್ ಆಂಗ್ಲ ಮಾಧ್ಯಮ ಶಾಲೆ ಬುಡೋಳಿ-ಗಡಿಯಾರ ಇಲ್ಲಿ ಕಡೇಶಿವಾಲಯ ಹಾಗೂ ಕೆದಿಲ ಕ್ಲಸ್ಟರ್‌ಗೊಳಪಟ್ಟ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಸೇರಿದಂತೆ ಒಟ್ಟು ಮೂವತ್ತು ಶಾಲೆಗಳ ಪ್ರತಿಭಾ ಕಾರಂಜಿ ಕಾರ್ಯಕ್ರಮ ನಡೆಯಿತು. ವಿಸ್ಡಮ್ ಆಂಗ್ಲ ಮಾಧ್ಯಮ ಶಾಲೆಯ ಆಡಳಿತ ಮಂಡಳಿಯ ವತಿಯಿಂದ ಶಾಲಾ ಸಂಚಾಲಕ ಅಬ್ದುಲ್ ಖಾದರ್ ಕುಕ್ಕಾಜೆ ಅಧ್ಯಕ್ಷತೆ ವಹಿಸಿದ್ದರು. ಗಿಡಕ್ಕೆ ನೀರೆರೆಯುವ ಮೂಲಕ ಕಡೇಶಿವಾಲಯ ಗ್ರಾಮ ಪಂಚಾಯತ್ ಅಧ್ಯಕ್ಷೆ ಭಾರತಿ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ  ಸುಧಾಕರ್ ಭಟ್ ಅವರು ಪ್ರಾಸ್ತಾವಿಕ ಮಾತುಗಳನ್ನಾಡಿದರು.



ಶಾಲಾ ಮುಖ್ಯ ಶಿಕ್ಷಕಿ ಆಮಿನಾ ಬಾನು ಸ್ವಾಗತಿಸಿದರು. ಶಾಲಾ ಸಂಚಾಲಕ ಅಬ್ದುಲ್ ಖಾದರ್ ಕುಕ್ಕಾಜೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಹ ಶಿಕ್ಷಕಿ ಕುಮಾರಿ ನಿಖಿತಾ ವಂದಿಸಿದರು. ಸಹ ಶಿಕ್ಷಕ ಹೈದರ್ ಕಾರ್ಯಕ್ರಮ ನಿರ್ವಹಿಸಿದರು. ಕಡೇಶಿವಾಲಯ ಗ್ರಾ.ಪಂ ಉಪಾಧ್ಯಕ್ಷ ಸುರೇಶ್ ಪೂಜಾರಿ ಕನ್ನೋಟ್, ನಗರ ಕ್ಲಸ್ಟರ್‌ನ ಮಾಜಿ ವಲಯ ಸಂಪನ್ಮೂಲ ವ್ಯಕ್ತಿ
ಸತೀಶ್ ರಾವ್, ಬಂಟ್ವಾಳ ತಾಲೂಕು ಶಿಕ್ಷಕ ಸಂಘದ ಅಧ್ಯಕ್ಷ ಗುರುರಾಜ್ ಪಾಟ್ರಕೋಡಿ,  ವಿಸ್ಡಮ್ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ ರಕ್ಷಕ ಸಂಘ ಅಧ್ಯಕ್ಷೆ ರಾಜೇಶ್ವರಿ ಹಾಗೂ ಪ್ರಧಾನ ಕಾರ್ಯದರ್ಶಿ ಝಕರಿಯಾ ದಾರಿಮಿ ಉಪಸ್ಥಿತರಿದ್ದರು.


ಸಂಜೆ ನಡೆದ ಮಾರೋಪ ಸಮಾರಂಭದಲ್ಲಿ ಗಡಿಯಾರ ಮುಹಿಯುದ್ದೀನ್ ಜುಮಾ ಮಸೀದಿಯ ಅಧ್ಯಕ್ಷ ರಿಯಾಝ್ ಕಲ್ಲಾಜೆ, ಶಾಲಾ ಶಿಕ್ಷಕ ರಕ್ಷಕ ಸಂಘದ ಮಾಜಿ ಅಧ್ಯಕ್ಷ ಹಾಜಿ ಇಸ್ಮಾಯಿಲ್ ಕಲ್ಲಾಜೆ, ಪೆರ್ಲಾಪು ಹಯಾತುಲ್ ಇಸ್ಲಾಮ್ ಜುಮಾ ಮಸೀದಿಯ ಖತೀಬ್ ಅಲ್ತಾಫ್ ದಾರಿಮಿ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಿಸುವಲ್ಲಿ, ಸಹಕರಿಸಿದ, ಭಾಗವಹಿಸಿದ ಎಲ್ಲಾ ಶಾಲೆಗಳ ಅಧ್ಯಾಪಕ ವೃಂದವನ್ನು ಶ್ಲಾಘಿಸಿ, ವಿಜೇತ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಶಾಲಾ ಸಂಚಾಲಕ ಅಬ್ದುಲ್ ಖಾದರ್ ಕುಕ್ಕಾಜೆ ಸಮಯೋಚಿತವಾಗಿ ಮಾತನಾಡಿದರು. ಗಡಿಯಾರ ಮುಹಿಯುದ್ದೀನ್ ಜುಮಾ ಮಸೀದಿಯ ಅಧ್ಯಕ್ಷ ರಿಯಾಝ್ ಕಲ್ಲಾಜೆ ಶುಭ ಹಾರೈಸಿದರು. ಸಹ ಶಿಕ್ಷಕಿ ಮುಬೀನಾ ಶುಭಾನ್ ಸ್ವಾಗತಿಸಿ ವಂದಿಸಿದರು.


ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಒಟ್ಟು ಏಳು ಪ್ರಶಸ್ತಿಗಳನ್ನು ಪಡೆದು ಕೆದಿಲ ಕ್ಲಸ್ಟರ್ ಮಟ್ಟದ ಚಾಂಪಿಯನ್, ಪ್ರಥಮ ಸ್ಥಾನವನ್ನು ದಕ್ಷಿಣ ಕನ್ನಡ ಜಿಲ್ಲಾ ಹಿರಿಯ ಪ್ರಾಥಮಿಕ ಶಾಲೆ ಮಲ್ಲಡ್ಕ ತನ್ನದಾಗಿಸಿಕೊಂಡಿತು. ಒಟ್ಟು ಐದು ಪ್ರಶಸ್ತಿಗಳನ್ನು ಪಡೆಯುವುದರೊಂದಿಗೆ, ದಕ್ಷಿಣ ಕನ್ನಡ ಜಿಲ್ಲಾ ಹಿರಿಯ ಪ್ರಾಥಮಿಕ ಶಾಲೆ ಕೆದಿಲ ದ್ವಿತೀಯ ಸ್ಥಾನವನ್ನು ಗಳಿಸಿತು
ದ.ಕ. ಹಿರಿಯ ಪ್ರಾಥಮಿಕ ಶಾಲೆ ಪಾಟ್ರಕೋಡಿ ನಾಲ್ಕು ಪ್ರಶಸ್ತಿಗಳನ್ನು ಪಡೆದು ತೃತೀಯ ಸ್ಥಾನ ಪಡೆಯಿತು.
ಕಡೇಶಿವಾಲಯ ಕ್ಲಸ್ಟರ್ ಮಟ್ಟದ ಸ್ಪರ್ಧೆಯಲ್ಲಿ ಕಡೇಶಿವಾಲಯ ಸ.ಉ.ಹಿ.ಪ್ರಾ. ಶಾಲೆ ಒಟ್ಟು ಹದಿನೈದು ಪ್ರಶಸ್ತಿಗಳನ್ನು ಪಡೆದು ಪ್ರಥಮ ಸ್ಥಾನವನ್ನು ಪಡೆದುಕೊಂಡಿತು. ಹತ್ತು ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡ ಕೆಮ್ಮಣ್ಣು ಪಲ್ಕೆ ಸ.ಹಿ.ಪ್ರಾ.ಶಾಲೆ ದ್ವಿತೀಯ ಸ್ಥಾನ ಪಡೆಯಿತು. ಐದು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡ ಶೆರಾ ಸ.ಹಿ.ಪ್ರಾ.ಶಾಲೆ  ತೃತೀಯ ಸ್ಥಾನ ಪಡೆಯಿತು. ಚಿತ್ರಕಲಾ, ಕವನ ವಾಚನ ಹಾಗೂ ಮಿಮಿಕ್ರಿ ಸ್ಪರ್ಧೆಗಳಲ್ಲಿ ಕ್ರಮವಾಗಿ ಪ್ರಥಮ ಸ್ಥಾನವನ್ನು ಪಡೆದ ವಿಸ್ಡಮ್ ಆಂಗ್ಲ ಮಾಧ್ಯಮ ಶಾಲೆ ಬುಡೋಳಿ ಗಡಿಯಾರ ಇಲ್ಲಿನ ಮೂವರು ವಿದ್ಯಾರ್ಥಿಗಳಾದ ಏಳನೇ ತರಗತಿಯ ಅನ್ಸಾಮ್ ಹಾಗೂ ನಿಷ್ಫಾ, ಆರನೇ ತರಗತಿಯ ಝಿಯಾನ್ ತಾಲೂಕು ಮಟ್ಟ ಪ್ರತಿಭಾ ಕಾರಂಜಿ ಸ್ಪರ್ಧೆಗೆ ಆಯ್ಕೆಯಾದರು.

ವಿಜೇತರೆಲ್ಲರಿಗೂ ಗಣ್ಯರಿಂದ ಬಹುಮಾನ ವಿತರಿಸಲಾಯಿತು. ಕ್ಲಸ್ಟರ್ ಮಟ್ಟದ ಈ ಸ್ಪರ್ಧೆಯಲ್ಲಿ, ಕಡೇಶಿವಾಲಯ ಕ್ಲಸ್ಟರ್ ಉಸ್ತುವಾರಿಯನ್ನು, ವಿಸ್ಡಮ್ ಆಂಗ್ಲ ಮಾಧ್ಯಮ ಶಾಲೆ ಬುಡೋಳಿ ಗಡಿಯಾರ ಇಲ್ಲಿನ ಸಹ ಶಿಕ್ಷಕಿಯವರಾದ ಸಿನಾನ ವಹಿಸಿಕೊಂಡರು. ವಿಸ್ಡಮ್ ಆಂಗ್ಲ ಮಾಧ್ಯಮ ಶಾಲೆಯ ಸಹ ಶಿಕ್ಷಕಿ ಅಲಿಮತ್ ಸಅದಿಯ ಅವರು ಕೆದಿಲ ಕ್ಲಸ್ಟರ್‌ಗೆ ಉಸ್ತುವಾರಿಯಾಗಿ ಕಾರ್ಯನಿರ್ವಹಿಸಿದರು.

Leave a Reply

Your email address will not be published. Required fields are marked *

error: Content is protected !!