ಕೆದಂಬಾಡಿ-ಕೆಯ್ಯೂರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿಕೃಷ್ಣ ಕುಮಾರ್ ರೈ ಕೆದಂಬಾಡಿಗುತ್ತು ಆಯ್ಕೆ
ಪುತ್ತೂರು: ಕೆದಂಬಾಡಿ ಕೆಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಕೃಷ್ಣ ಕುಮಾರ್ ರೈ ಕೆದಂಬಾಡಿಗುತ್ತು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸಂಘದ ಅಧ್ಯಕ್ಷರಾಗಿದ್ದ ಶಶಿಧರ ರಾವ್ ಬೊಳಿಕ್ಕಲರವರ ನಿಧನದಿಂದಾಗಿ ತೆರವಾದ ಸ್ಥಾನಕ್ಕೆ ನ.26ರಂದು ಚುನಾವಣೆ ನಡೆಯಿತು. ಸಂಘದ ಉಪಾಧ್ಯಕ್ಷರಾಗಿದ್ದ ಕೃಷ್ಣ ಕುಮಾರ್ ರೈ ಕೆದಂಬಾಡಿಗುತ್ತುರವರು ಮಾತ್ರ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಕೆ ಮಾಡಿದ್ದರಿಂದ ಅವಿರೋಧವಾಗಿ ಆಯ್ಕೆಯಾದರು. ಚುನಾವಣಾ ಅಧಿಕಾರಿಯಾಗಿದ್ದ ರಿಟರ್ನಿಂಗ್ ಅಧಿಕಾರಿ ಶೋಭಾ ಎನ್.ಎಸ್‌ರವರು ಕೃಷ್ಣ ಕುಮಾರ್ ರೈಯವರನ್ನು ಸಂಘದ ಅಧ್ಯಕ್ಷರನ್ನಾಗಿ ಘೋಷಣೆ ಮಾಡಿದರು. ಸಂಘದ ನಿರ್ದೇಶಕರು, ಸಿಬ್ಬಂದಿಗಳು ಉಪಸ್ಥಿತರಿದ್ದರು.




