ಕಡಬ: ಪತ್ನಿ ಜೊತೆ ಗೆಳೆಯ ಮೊಬೈಲ್ ಸಂಪರ್ಕ, ಮನನೊಂದು ಯುವಕ ಆತ್ಮಹತ್ಯೆ
ಕಡಬ: ಕುಟ್ರುಪ್ಪಾಡಿ ನಿವಾಸಿ ಸೊಲೊಮೊನ್ ಎಂಬವರ ದೂರಿನಂತೆ, ಸದ್ರಿಯವರ ಮಗ ರಾಕೇಶ್ (36) ಎಂಬವರು ಕಡಬದ ಕಳಾರ ಎಂಬಲ್ಲಿ ದ್ವಿಚಕ್ರ ವಾಹನಗಳ ಗ್ಯಾರೇಜ್ ಇಟ್ಟುಕೊಂಡಿದ್ದು, ಆತನ ಪತ್ನಿಯೊಂದಿಗೆ ಆತನ ಗೆಳೆಯನೊಬ್ಬ ಮೊಬೈಲ್ ಪೋನ್ ಮೂಲಕ ಸಂಪರ್ಕದಲ್ಲಿರುವ ವಿಷಯ ತಿಳಿದ ರಾಕೇಶ್ ತೀವ್ರವಾಗಿ ಬೇಸರಗೊಂಡು ದಿನಾಂಕ: 19-11-2025 ರಂದು ಸಂಜೆ, ಕಡಬ ಬಜಾಜ್ ಶೋ ರೂಂ ಹಿಂದುಗಡೆ ಅಮಲು ಪದಾರ್ಥದೊಂದಿಗೆ ಇಲಿಪಾಷಾನ ಸೇವಿಸಿ ಆತ್ಮಹತ್ಯೆ ಮಾಡಲು ಯತ್ನಿಸಿದ್ದರು.

ಕೂಡಲೇ ಅಲ್ಲಿದ್ದವರು ರಾಕೇಶ್ ನನ್ನು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದು, ಬಳಿಕ ಅಲ್ಲಿಂದ ಹೆಚ್ಚಿನ ಚಿಕಿತ್ಸೆ ಬಗ್ಗೆ ಮಂಗಳೂರಿನ ಫಾ| ಮುಲ್ಲರ್ ಆಸ್ಪತ್ರೆಗೆ ದೂರುದಾರರ ದೊಡ್ಡ ಮಗ ರಾಜೇಶ್ ರವರು ದಾಖಲಿಸಿರುತ್ತಾರೆ. ಅಲ್ಲಿ ಒಳರೋಗಿಯಾಗಿ ದಾಖಲಾಗಿದ್ದ ರಾಕೇಶ್ ದಿನಾಂಕ:26-11-2025 ರಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿರುತ್ತಾರೆ. ಈ ಬಗ್ಗೆ ದಿನಾಂಕ 26.11.2025 ರಂದು ಕಡಬ ಪೊಲೀಸ್ ಠಾಣೆಯಲ್ಲಿ ಯುಡಿಆರ್ ನಂ: 35/2025 ಕಲಂ:194 (3) (iv) BNSS-2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.





