ಅಂತಾರಾಷ್ಟ್ರೀಯ

ಹಾಂಗ್ ಕಾಂಗ್ ನಲ್ಲಿ ಭೀಕರ ಅಗ್ನಿ ಅವಘಡ: ಕನಿಷ್ಠ 44 ಮಂದಿ ಸಜೀವ ದಹನ

ಹಾಂಗ್ ಕಾಂಗ್: ಹಾಂಗ್ ಕಾಂಗ್ ನಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿ 32 ಅಂತಸ್ತಿನ ಅಪಾರ್ಟ್ ಮೆಂಟ್ ನಲ್ಲಿ ಬೆಂಕಿ ಕಾಣಿಸಿಕೊಂಡು ಕನಿಷ್ಠ 44 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.



ಪ್ರವಾಸಿಗರ ನೆಚ್ಚಿನ ತಾಣವಾದ ಹಾಂಗ್ ಕಾಂಗ್‌ನ ಉತ್ತರ ತೈ ಪೊ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭಾರಿ ಬೆಂಕಿ ಅವಘಡದಲ್ಲಿ ಕನಿಷ್ಠ 44 ಜನರು ಸಾವನ್ನಪ್ಪಿದ್ದು, ಹಲವಾರು ಜನರು ಗಾಯಗೊಂಡಿದ್ದಾರೆ.
ಬೆಂಕಿ ವೇಗವಾಗಿ ಹರಡುತ್ತಿದ್ದಂತೆ ಸುಮಾರು 700 ನಿವಾಸಿಗಳನ್ನು ತಾತ್ಕಾಲಿಕ ಬೇರೆಡೆಗೆ ಸ್ಥಳಾಂತರಿಸಲಾಯಿತು. ಬೆಂಕಿ ಆರಿಸಲು ಬಂದಿದ್ದ ಅಗ್ನಿಶಾಮಕ ದಳದ ಸಿಬ್ಬಂದಿಯೂ ಸೇರಿದಂತೆ 44 ಜನರು ಮೃತಪಟ್ಟಿದ್ದಾರೆ.

ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣಾ ಕಾರ್ಯ ತೀವ್ರಗೊಂಡಿದೆ. ಕಟ್ಟಡಗಳ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ ಗಾಯಾಳುಗಳ ಪೈಕಿ ಹಲವರು ಸಾವನ್ನಪ್ಪಿದ್ದಾರೆ.

‘ನ್ಯೂ ಟೆರಿಟರೀಸ್’ ಬಳಿಯ ಏಳು ಬಹುಮಹಡಿ ಅಪಾರ್ಟ್‌ಮೆಂಟ್ ಕಟ್ಟಡಗಳಿಗೆ ಬೆಂಕಿ ಅಕಸ್ಮಾತ್ತಾಗಿ ಹೊತ್ತಿಕೊಂಡಿತ್ತು. ಬೆಂಕಿ ಕೂಡಲೇ ವ್ಯಾಪಿಸಿದ ಪರಿಣಾಮ, ದುರಂತದಲ್ಲಿ ಹಲವು ಜನರು ಸ್ಥಳದಲ್ಲೇ ಮೃತಪಟ್ಟಿದ್ದರೆ, ಆಸ್ಪತ್ರೆಗೆ ಕಳುಹಿಸಲಾದ ಕೆಲವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಹಲವರು ಕಟ್ಟಡದಲ್ಲಿ ಸಿಲುಕಿಕೊಂಡಿದ್ದಾರೆ ಎನ್ನಲಾಗಿದೆ.

Leave a Reply

Your email address will not be published. Required fields are marked *

error: Content is protected !!