ಕಾವೂರು: ಗಾಂಜಾ ಹಾಗೂ ಎಂ.ಡಿ.ಎಂ ಮಾರಾಟಕ್ಕೆ ಯತ್ನ: ಆರೋಪಿಗಳಿಬ್ಬರ ಬಂಧನ
ಮಂಗಳೂರು: ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಬಂಗ್ರ-ಕೂಳೂರು ಎಂಬಲ್ಲಿಯ ಘಾಲ್ಗುಣಿ ನದಿಯ ಬಳಿ ಗಾಂಜಾ ಮಾರಾಟ ಮಾಡುತ್ತಿರುವ ಮಾಹಿತಿಯಂತೆ ಸ್ಥಳಕ್ಕೆ ದಾಳಿ ನಡೆಸಿದ ಪೊಲೀಸರು ಇಬ್ಬರನ್ನು ಬಂಧಿಸಿದ ಘಟನೆ ಡಿ.2ರಂದು ನಡೆದಿದೆ.

ತುಮಕೂರು ಮೂಲದ ಶಾಫಿ ಅಹ್ಮದ್ (40) ಹಾಗೂ ಮೊಹಮ್ಮದ್ ಸಮೀರ್ (20) ಬಂಧಿತ ಆರೋಪಿಗಳು. ಆರೋಪಿಗಳ ಬಳಿಯಿದ್ದ ಸುಮಾರು 12 ಗ್ರಾಂ ಎಂ.ಡಿ.ಎಂ (ಅಂದಾಜು ಮೌಲ್ಯ ರೂ.70,000/-) ಹಾಗೂ 275 ಗ್ರಾಂ ಗಾಂಜಾ (ಅಂದಾಜು ಮೌಲ್ಯ ರೂ. 10,000/-) ಮತ್ತು 2 ಮೊಬೈಲ್ ಪೋನ್ ಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದ್ದು, ಈ ಕುರಿತು ಕಾವೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ. 177/2025 ಕಲಂ: 8(C), 21(C), 20(B) NDPS Act ನಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಆರೋಪಿಗಳು ಗಾಂಜಾ ಮತ್ತು ಎಂ.ಡಿ.ಎಂ ನ್ನು ಬೆಂಗಳೂರಿನಲ್ಲಿ ಖರೀದಿಸಿರುವುದಾಗಿ ಪೊಲೀಸರ ವಿಚಾರಣೆ ವೇಳೆ ತಿಳಿಸಿದ್ದಾರೆ. ಆರೋಪಿ ಶಾಫಿ ಅಹ್ಮದ್ ಎಂಬಾತನ ಮೇಲೆ ಒಟ್ಟು 9 ಪ್ರಕರಣಗಳು ದಾಖಲಾಗಿದ್ದು ಆತನು ಹಲವು ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದು ನ್ಯಾಯಾಲಯವು ವಾರಂಟ್ ಹಾಗೂ ಪ್ರೊಕ್ಲಮೇಶನ್ ಜ್ಯಾರಿಗೊಳಿಸಿರುತ್ತದೆ. ಆರೋಪಿ ಮೊಹಮ್ಮದ್ ಸಮೀರ್ ಎಂಬಾತನ ಮೇಲೆ 1 ಪ್ರಕರಣ ದಾಖಲಾಗಿರುತ್ತದೆ.
ಶ್ರೀಕಾಂತ್ ಕೆ. ಎ.ಸಿ.ಪಿ ಪಣಂಬೂರು, ರಾಘವೇಂದ್ರ ಬೈಂದೂರ್ ಪಿಐ ಕಾವೂರು, ಮಲ್ಲಿಕಾರ್ಜುನ್, ಪಿ.ಎಸ್.ಐ, ಕಾವೂರು ಹಾಗೂ ಎ.ಎಸ್.ಐ ಚಂದ್ರಶೇಖರ್, ಸಿಬ್ಬಂದಿಗಳಾದ ರೆಜಿ ಎಂ, ಹಾಲೇಶ್ ನಾಯ್ಕ್, ರಿಯಾಜ್ ಎಂಬವರೊಂದಿಗೆ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.



