ಬೆಳ್ತಂಗಡಿ: ಕಾರು ಢಿಕ್ಕಿ ಹೊಡೆದು ಬಾಲಕ ಮೃತ್ಯು
ಬೆಳ್ತಂಗಡಿ: ಕಾರು ಢಿಕ್ಕಿ ಹೊಡೆದು ಬಾಲಕ ಮೃತಪಟ್ಟ ಘಟನೆ ಡಿ.3ರಂದು ಚಾರ್ಮಾಡಿಯಲ್ಲಿ ನಡೆದಿದೆ.

ಚಾರ್ಮಾಡಿ ಗ್ರಾಪಂ ಸದಸ್ಯ, ಬೀಟಿಗೆ ನಿವಾಸಿ ಸಿದ್ದೀಕ್ ಯು.ಪಿ. ಎಂಬವರ ಪುತ್ರ ಮುಹಮ್ಮದ್ ಹಝೀರಿನ್(3) ಮೃತ ಬಾಲಕ.
ಹಝೀರಿನ್ ಗೆ ಮನೆಯ ಸಮೀಪ ಇರುವ ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ಮೂಡಿಗೆರೆ ಕಡೆಯಿಂದ ವೇಗವಾಗಿ ಬಂದ ಕಾರು ಢಿಕ್ಕಿ ಹೊಡೆದಿದೆ. ಪರಿಣಾಮ ಬಾಲಕ ಗಂಭೀರವಾಗಿ ಗಾಯಗೊಂಡಿದ್ದು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಆ ವೇಳೆಗೆ ಬಾಲಕ ಮೃತಪಟ್ಟಿದ್ದ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಠಾಣೆಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.





