ಕರಾವಳಿಕ್ರೈಂ

ಉಪ್ಪಿನಂಗಡಿ: ಅಪ್ರಾಪ್ತ ಬಾಲಕಿ ಆತ್ಮಹತ್ಯೆ ಪ್ರಕರಣ; ಇಬ್ಬರು ಆರೋಪಿಗಳ ಪೈಕಿ ಓರ್ವ ಅಪ್ರಾಪ್ತ

ಉಪ್ಪಿನಂಗಡಿ: ಅಪ್ರಾಪ್ತ ಬಾಲಕಿ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳ ಪೈಕಿ ಪ್ರಮುಖ ಆರೋಪಿಯು ಅಪ್ರಾಪ್ತನೆಂದು ಪ್ರಾಥಮಿಕ ತನಿಖೆಯಲ್ಲಿ ಕಂಡುಬಂದಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.


ಪ್ರಕರಣದ ದೂರುದಾರರ ಅಪ್ರಾಪ್ತ ಪ್ರಾಯದ ಮಗಳು, ನ.4 ರಂದು ಮನೆಯಲ್ಲಿ ಕೀಟನಾಶಕ ಸೇವಿಸಿ ಅಸ್ವಸ್ಥಗೊಂಡಿದ್ದು ನ.12ರಂದು ಆಸ್ಪತ್ರೆಯಲ್ಲಿ ಮೃತಪಟ್ಟ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಯು.ಡಿ.ಆರ್ ನಂಬ್ರ: 56/2025 ಕಲಂ: 194 (3) (IV)BNSS ರಂತೆ ಪ್ರಕರಣ ದಾಖಲಾಗಿದೆ.
ಪ್ರಕರಣ ಮುಂದುವರಿದಂತೆ, ಮೃತ ಬಾಲಕಿಯನ್ನು ಓರ್ವ ಆರೋಪಿಯು ಲೈಂಗಿಕವಾಗಿ ಬಳಸಿಕೊಂಡಿದ್ದು, ಮತ್ತೋರ್ವ ಆರೋಪಿಯೊಂದಿಗೆ ಸೇರಿ ಬಾಲಕಿಗೆ ಕಿರುಕುಳ ನೀಡಿ, ಬೆದರಿಸಿರುವುದರಿಂದ ಬಾಲಕಿಯು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ, ಮೃತ ಬಾಲಕಿಯ ತಾಯಿ ನ. 28ರಂದು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ದೂರಿನ ಮೇರೆಗೆ ಅ.ಕ್ರ:  111/2025 ಕಲಂ ಕಲಂ: 74, 79, 108 ಜೊತೆಗೆ 3(5) BNS & ಕಲಂ:  8 ಫೋಕ್ಸೋ ಕಾಯ್ದೆ ಯಂತೆ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!