ಕರಾವಳಿಕ್ರೈಂ

ಮನೆಗೆ ಅಕ್ರಮ ಪ್ರವೇಶ ಆರೋಪ: ಕಡಬ ಠಾಣಾ ಹೆಡ್ ಕಾನ್‌ಸ್ಟೇಬಲ್‌ನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು

ಕಡಬ: ಮನೆಯೊಂದಕ್ಕೆ ತಡರಾತ್ರಿ ಅಕ್ರಮ ಪ್ರವೇಶಗೈದ ಕಡಬ ಠಾಣಾ ಹೆಡ್‌ ಕಾನ್‌ಸ್ಟೇಬಲ್‌ನನ್ನು ಊರವರು ಹಿಡಿದಿದ್ದು, ಈ ವೇಳೆ ಸ್ಥಳದಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದ ಮನೆಯ ಸದಸ್ಯರೊಬ್ಬರಿಗೆ ಹಲ್ಲೆ ನಡೆಸಿರುವ ಘಟನೆ ಕಡಬ ಠಾಣಾ ವ್ಯಾಪ್ತಿಯ ಕೊಯಿಲ ಎಂಬಲ್ಲಿ ಡಿ.3ರಂದು ನಡೆದಿದೆ.


ಕಡಬ ಠಾಣೆಯ ಹೆಡ್ ಕಾನ್‌ಸ್ಟೇಬಲ್ ರಾಜು ನಾಯ್ಕ ಆರೋಪಿ. ಈತ ತಡರಾತ್ರಿ ಕೊಯಿಲ ನಿವಾಸಿ ಹರೀಶ್ ಎಂಬವರ ಮನೆಗೆ ಅಕ್ರಮವಾಗಿ ಪ್ರವೇಶಗೈದಿದ್ದು, ಈ ವೇಳೆ ಮನೆ ಮಂದಿ ಹಿಡಿದಿದ್ದಾರೆ ಎನ್ನಲಾಗಿದೆ. ಸ್ಥಳದಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದ ಚೇತನ್ ಎಂಬವರಿಗೆ ಹಲ್ಲೆಗೈದಿದ್ದಾರೆ. ಈ ಬಗ್ಗೆ ಕೊಯಿಲ ನಿವಾಸಿ ಬಾಬು ಗೌಡ ಎಂಬವರ ದೂರಿನಂತೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ರಾಜು ನಾಯ್ಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದ್ದು, ಕರ್ತವ್ಯದಿಂದ ಅಮಾನತುಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ

Leave a Reply

Your email address will not be published. Required fields are marked *

error: Content is protected !!