ಕ್ರೈಂರಾಷ್ಟ್ರೀಯ

ಗೋವಾ ನೈಟ್ ಕ್ಲಬ್ನಲ್ಲಿ ಭೀಕರ ಅಗ್ನಿ ದುರಂತ: ಪ್ರವಾಸಿಗರು ಸೇರಿ 23 ಮಂದಿ ಸಜೀವ ದಹನ

ಪಣಜಿ: ಉತ್ತರ ಗೋವಾದ ಅರ್ಪೋರಾದಲ್ಲಿರುವ ರೋಮಿಯೋ ಲೇನ್‌ನ ಪ್ರಸಿದ್ಧ ನೈಟ್‌ಕ್ಲಬ್ ಬಿರ್ಚ್‌ನಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, ಘಟನೆಯಲ್ಲಿ ಪ್ರವಾಸಿಗರು ಸೇರರಿ 23 ಮಂದಿ ಸಜೀವದಹನಗೊಂಡಿರುವ ಘಟನೆ ಶನಿವಾರ ರಾತ್ರಿ ನಡೆದಿದೆ. ದುರ್ಘಟನೆಯಲ್ಲಿ 50 ಮಂದಿಕ್ಕೂ ಹೆಚ್ಚು ಗಾಯಗೊಂಡಿದ್ದಾರೆಂದು ತಿಳಿದುಬಂದಿದ್ದು, ಎಲ್ಲರೂ ಗೋವಾದ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೃತರಲ್ಲಿ ಮೂರರಿಂದ ನಾಲ್ಕು ಮಂದಿ ಪ್ರವಾಸಿಗರು ಮತ್ತು ಕ್ಲಬ್ ನ 19 ಸಿಬ್ಬಂದಿ ಸೇರಿದ್ದಾರೆ ಎನ್ನಲಾಗುತ್ತಿದೆ.
ಶನಿವಾರ ತಡರಾತ್ರಿ ಘಟನೆ ಸಂಭವಿಸಿದ್ದು, ಅಡುಗೆ ಮನೆಯಲ್ಲಿ ಸಿಲಿಂಡರ್ ಸ್ಫೋಟವಾಗಿರಬಹುದು ಎಂದು ಶಂಕಿಸಲಾಗಿತ್ತು. ಆದರೆ, ಇನ್ನೂ ಯಾವುದೇ ದೃಢೀಕರಣಗಳು ಲಭ್ಯವಾಗಿಲ್ಲ. ಸ್ಫೋಟದ ತೀವ್ರತೆಗೆ ಬೆಂಕಿಯ ಜ್ವಾಲೆಗಳು ಕೆಲವೇ ಸೆಕೆಂಡುಗಳಲ್ಲಿ ಇಡೀ ಕಟ್ಟಡವನ್ನು ಆವರಿಸಿಕೊಂಡಿತ್ತು. ತಪ್ಪಿಸಿಕೊಳ್ಳಲು ಒಳಗಿರುವವರಿಗೆ ತುಂಬಾ ಕಡಿಮೆ ಸಮಯ ಇತ್ತು ಎನ್ನಲಾಗಿದೆ.

Leave a Reply

Your email address will not be published. Required fields are marked *

error: Content is protected !!