ಕರಾವಳಿಕ್ರೈಂ

ಬಾಲಕನಿಗೆ ಲೈಂಗಿಕ ಕಿರುಕುಳ: ಆರೋಪಿಯ ಬಂಧನ

ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ವ್ಯಕ್ತಿಯೋರ್ವನನ್ನು ಪೋಕ್ಸೋ ಕಾಯ್ದೆಯಡಿ ಸುರತ್ಕಲ್ ಠಾಣಾ ಪೊಲೀಸರು ಬಂಧಿಸಿದ್ದಾರೆ. ಚೊಕ್ಕಬೆಟ್ಟು ನಿವಾಸಿ ಅಬ್ದುಲ್ ಇಸ್ಮಾಯೀಲ್ ಬಂಧಿತ ಆರೋಪಿ.


ಆರೋಪಿ ಇಸ್ಲಾಯಿಲ್ ತನ್ನ ಅಂಗಡಿಗೆ ಚಾಕಲೇಟು ಖರೀದಿಸಲೆಂದು ಬಂದಿದ್ದ 11 ವರ್ಷದ ಬಾಲಕನ ಕೈ-ಕಾಲನ್ನು ಕಟ್ಟಿ ಅಂಗಡಿಯ ಒಂದು ಕೊಠಡಿಯಲ್ಲಿ ಕೂಡಿಹಾಕಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಬಾಲಕನ ತಾಯಿ ಸುರತ್ಕಲ್ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!