ಡ್ರಗ್ಸ್ ಸಾಗಾಟದ ಆರೋಪಿಗಳಿಗೆ ಕಠಿಣ ಸಜೆ: ಸರಕಾರಿ ಅಭಿಯೋಜಕರಿಗೆ ಪೊಲೀಸ್ ಆಯುಕ್ತರಿಂದ ಸನ್ಮಾನ
ಮಂಗಳೂರು: ಮಂಗಳೂರು ನಗರಕ್ಕೆ ನಿಷೇಧಿತ ಮಾದಕ ದ್ರವ್ಯ ಎಂಡಿಎಂಎ ಪೂರೈಕೆ ಮಾಡುತ್ತಿದ್ದ ಐವರು ಆರೋಪಿಗಳು ಕಠಿಣ ಸಜೆಗೆ ಒಳಗಾಗುವಂತೆ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯದಲ್ಲಿ ಸಮರ್ಥವಾಗಿ ವಾದ ಮಂಡಿಸಿದ ಸರಕಾರಿ ಅಭಿಯೋಜಕ ಜುಡಿತ್ ಓಲ್ಲಾ ಮಾರ್ಗರೇಟ್ ಕ್ರಾಸ್ತಾರನ್ನು ನಗರ ಪೊಲೀಸ್ ಆಯುಕ್ತರ ಕಚೇರಿ ವತಿಯಿಂದ ಸೋಮವಾರ ಸನ್ಮಾನಿಸಲಾಯಿತು.

ಜುಡಿತ್ ಓಲ್ಲಾ ಮಾರ್ಗರೇಟ್ ಕ್ರಾಸ್ತಾ ರನ್ನು ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಸನ್ಮಾನಿಸಿ ಅಭಿನಂದಿಸಿದರು.
ಈ ಸಂದರ್ಭ ಕಾನೂನು ಸುವ್ಯವಸ್ಥೆ ಡಿಸಿಪಿ ಮಿಥುನ್, ಸೆನ್ ಪೊಲೀಸ್ ಠಾಣೆ ಎಸಿಪಿ ರವೀಶ್ ನಾಯಕ್ ಉಪಸ್ಥಿತರಿದ್ದರು.





