ಕೆದಿಲ ಗ್ರಾಮದ ವಿವಿಧ ರಸ್ತೆಗಳ ಅಭಿವೃದ್ಧಿಗೆ ಶಾಸಕ ಅಶೋಕ್ ರೈಯವರು ಅನುದಾನ ಬಿಡುಗಡೆ ಗೊಳಿಸುವ ಮೂಲಕ ನಮ್ಮ ಬಹುಕಾಲದ ಬೇಡಿಕೆ ಈಡೇರಿಸಿದ್ದಾರೆ-ಖಾದರ್ ಪಾಟ್ರಕೋಡಿ
ಪುತ್ತೂರು: ಪುತ್ತೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಬಂಟ್ವಾಳ ತಾಲೂಕಿನ ಕೆದಿಲ ಗ್ರಾಮದ ವಿವಿಧ ರಸ್ತೆಗಳ ಅಭಿವೃದ್ದಿಗಾಗಿ ಶಾಸಕ ಅಶೋಕ್ ಕುಮಾರ್ ರೈ ಅವರು ಲಕ್ಷಾಂತರ ರೂ ಅನುದಾನ ಬಿಡುಗಡೆಗೊಳಿಸಿದ್ದು ಆ ಮೂಲಕ ಗ್ರಾಮೀಣ ಭಾಗದ ಅಭಿವೃದ್ಧಿಗೂ ಶಾಸಕರು ವಿಶೇಷ ಒತ್ತು ನೀಡಿದ್ದಾರೆ, ಎಂದು ಕಾಂಗ್ರೆಸ್ ಮುಖಂಡ ಅಬ್ದುಲ್ ಖಾದರ್ ಪಾಟ್ರಕೋಡಿ ತಿಳಿಸಿದ್ದಾರೆ.

ನಮ್ಮ ಬಹುಕಾಲದ ಬೇಡಿಕೆಯನ್ನು ಶಾಸಕರು ಈಡೇರಿಸಿದ್ದು ಇದು ನಮ್ಮೆಲ್ಲರ ಬೇಡಿಕೆಗೆ ಸಿಕ್ಕಿದ ಜಯವಾಗಿದೆ, ಅನುದಾನ ನೀಡಿದ ಶಾಸಕರಿಗೆ ಹಾಗೂ ಸಹಕರಿಸಿದ ಎಲ್ಲಾ ಸ್ಥಳೀಯ ನಾಯಕರಿಗೆ ಮತ್ತು ಹೋರಾಟಗಾರರಿಗೆ ಅಭಿನಂದನೆ ಸಲ್ಲಿಸುವುದಾಗಿ ಖಾದರ್ ಪಾಟ್ರಕೋಡಿ ತಿಳಿಸಿದ್ದಾರೆ.




