ಕ್ರೈಂರಾಷ್ಟ್ರೀಯ

ಕಂದಕಕ್ಕೆ ಉರುಳಿದ ಖಾಸಗಿ ಬಸ್: ಕನಿಷ್ಠ 9 ಮಂದಿ ಪ್ರಯಾಣಿಕರು ಸಾವು

 ಖಾಸಗಿ ಟ್ರಾವೆಲ್ ಬಸ್ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಕನಿಷ್ಠ 9 ಮಂದಿ ಪ್ರಯಾಣಿಕರು ಮೃತಪಟ್ಟಿರುವ ಘಟನೆ ಆಂಧ್ರ ಪ್ರದೇಶದ ಚಿಂತೂರು-ಮರೇಡುಮಿಲ್ಲಿ ಘಾಟ್ ರಸ್ತೆಯಲ್ಲಿ ಶುಕ್ರವಾರ ನಸುಕಿನ ಜಾವ ಸಂಭವಿಸಿದೆ.

ಅನ್ನಾವರಂ ಕಡೆಗೆ 35 ಮಂದಿ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಇದಾಗಿತ್ತು. ಮಾಹಿತಿಯ ಪ್ರಕಾರ, ಕನಿಷ್ಠ ಒಂಬತ್ತು ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇಪ್ಪತ್ತೆರಡು ಜನರು ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಹತ್ತಿರದ ವೈದ್ಯಕೀಯ ಸೌಲಭ್ಯಗಳಿಗೆ ಸ್ಥಳಾಂತರಿಸಲಾಗುತ್ತಿದೆ. ಎಲ್ಲರೂ ಚಿತ್ತೂರು ಜಿಲ್ಲೆಯ ನಿವಾಸಿಗಳಾಗಿದ್ದು, ಅಪಘಾತದ ಸಮಯದಲ್ಲಿ ಅವರನ್ನು ತೀರ್ಥಯಾತ್ರೆಗೆ ಕರೆದೊಯ್ಯಲಾಗಿತ್ತು. ರಾಜುಗರಿಮೆಟ್ಟ ತಿರುವಿನಲ್ಲಿ ಈ ಘಟನೆ ಸಂಭವಿಸಿದ್ದು, ಚಾಲಕ ವಾಹನದ ನಿಯಂತ್ರಣ ಕಳೆದುಕೊಂಡು ಕಂದಕಕ್ಕೆ ಬಸ್ ಉರುಳಿ ಬಿದ್ದಿತು ಎಂದು ಹೇಳಲಾಗುತ್ತಿದೆ.

ಪೊಲೀಸರು ಮತ್ತು ಸ್ಥಳೀಯ ನಿವಾಸಿಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!