ರಾಜಕೀಯರಾಷ್ಟ್ರೀಯ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ತಿರುವನಂತಪುರಂ ಪಾಲಿಕೆ ಬಿಜೆಪಿ ತೆಕ್ಕೆಗೆ

ತಿರುವನಂತಪುರಂ: ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಫಲಿತಾಂಶ ಪ್ರಕಟಗೊಳ್ಳುತ್ತಿದ್ದು ರಾಜಧಾನಿ ತಿರುವನಂತಪುರಂ ಪಾಲಿಕೆಯಲ್ಲಿ ಇದೇ ಮೊದಲ ಬಾರಿಗೆ ಬಿಜೆಪಿ ನೇತೃತ್ವದ ಎನ್‌ಡಿಎ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.

ಸಾಂದರ್ಭಿಕ ಚಿತ್ರ


101 ವಾರ್ಡ್‌ಗಳ ಪೈಕಿ 50 ರಲ್ಲಿ ಬಿಜೆಪಿ ಜಯಗಳಿಸಿದೆ. ಈ ಮೂಲಕ ಎಲ್‌ಡಿಎಫ್‌ನ 45 ವರ್ಷಗಳ ಆಡಳಿತವನ್ನು ಕೊನೆಗೊಳಿಸಿದೆ. ಆಡಳಿತದಲ್ಲಿರುವ ಎಲ್‌ಡಿಎಫ್‌ 29 ವಾರ್ಡ್‌ಗಳಲ್ಲಿ ಜಯಗಳಿಸಿದರೆ ಯುಡಿಎಫ್‌ ಮೈತ್ರಿಕೂಟ 19 ವಾರ್ಡ್‌ಗಳಲ್ಲಿ ಮಾತ್ರ ಜಯ ಸಾಧಿಸಿದೆ. ಎರಡು ಕ್ಷೇತ್ರವನ್ನು ಇತರರು ಗೆದ್ದಿದ್ದಾರೆ.  ಬಹುಮತಕ್ಕೆ 51 ಸ್ಥಾನಗಳ ಅಗತ್ಯವಿದೆ.

Leave a Reply

Your email address will not be published. Required fields are marked *

error: Content is protected !!