ಕರಾವಳಿಕ್ರೈಂ

ಪುತ್ತೂರು:ತಾವರೆ ನೀರಿನ ಟ್ಯಾಂಕ್‌ಗೆ ಮಗು ಬಿದ್ದು ಸಾವು

ಪುತ್ತೂರು: ತಾವರೆ ಬೆಳೆದ ನೀರಿನ ಟ್ಯಾಂಕ್‌ಗೆ ಒಂದೂವರೆ ವರ್ಷದ ಮಗು ಬಿದ್ದು ಸಾವನ್ನಪ್ಪಿರುವ ಘಟನೆ ಪುತ್ತೂರಿನ ಬನ್ನೂರು ನೀರ್ಪಾಜೆಯಲ್ಲಿ ಈ ಘಟನೆ ನಡೆದಿದೆ.


ಮನೆಯಂಗಳದಲ್ಲಿ ಮಗುವಿಗೆ ಊಟ ಕೊಡುತ್ತಿದ್ದ ತಾಯಿ ಮನೆಯೊಳಗೆ ಹೋಗಿ ಬರುತ್ತಿದ್ದಂತೆ ಮಗು ನಾಪತ್ತೆಯಾಗಿದೆ. ಹುಡುಕಾಡಿದಾಗ ಮನೆಯಂಗಳದ ತಾವರೆ ನೀರಿನ ಟ್ಯಾಂಕ್‌ಗೆ ಬಿದ್ದಿರುವುದು ಗಮನಕ್ಕೆ ಬಂದಿದೆ. ತಕ್ಷಣ ಮಗುವನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅಷ್ಟರಲ್ಲಾಗಲೇ ಮಗು ಮೃತಪಟ್ಟಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!