ಡ್ರಗ್ ಪೆಡ್ಲರ್‌ಗಳಿಗೆ ಮಾದಕ ವಸ್ತು ಪೂರೈಕೆ: ಮಹಿಳೆ ಸಹಿತ ಮೂವರು ಆರೋಪಿಗಳ ಬಂಧನ:
ಮಂಗಳೂರು: ಬೆಂಗಳೂರಿನಿಂದ ಮಾದಕ ವಸ್ತು (ಎಂಡಿಎಂಎ) ತಂದು ಮಂಗಳೂರಿನ ಡ್ರಗ್ ಪೆಡ್ಡರ್ ಗಳಿಗೆ ಪೂರೈಕೆ ಮಾಡುತ್ತಿದ್ದ ತಂಡದ ಮೂವರನ್ನು ಮಂಗಳೂರು ಸಿಸಿಬಿ ಘಟಕದ ಪೊಲೀಸರು ಶನಿವಾರ ಅರ್ಕುಳ ಬಳಿ ಬಂಧಿಸಿದ್ದಾರೆ.

ಮಂಗಳೂರು ಮಲ್ಲೂರಿನ ಅಹ್ಮದ್ ಸಾಬಿತ್ (35), ಬಂಟ್ವಾಳ ಪರ್ಲಿಯಾದ ಮುಹಮ್ಮದ್ ಶಂಶೀರ್ (36) ಮತ್ತು ಸರಪಾಡಿಯ ನೌಶೀನ(27) ಬಂಧಿತ ಆರೋಪಿಗಳು. ಇವರಿಂದ 90 ಗ್ರಾಂ ಎಂಡಿ ಎಂಎ, ಕಾರು ಮತ್ತು ಮೊಬೈಲ್ ಪೋನ್ ಗಳನ್ನು ವಶಪಡಿಸಿಕೊಂಡಿರುವುದಾಗಿ ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ಅಹ್ಮದ್ ಸಾಬಿತ್ ಎಂಬಾತ ಮಂಗಳೂರಿನ ಡ್ರಗ್ ಪೆಕ್ಟರ್ ಗಳಿಗೆ ಬೆಂಗಳೂರಿನಿಂದ ಮಾದಕ ವಸ್ತು ಎಂಡಿಎಂನ್ನು ತಂದು ನಿರಂತರವಾಗಿ ಪೂರೈಕೆ ಮಾಡುತ್ತಿದ್ದು, ಅಲ್ಲದೇ ಈ ತಂಡದಲ್ಲಿ ಯಾರಿಗೂ ಅನುಮಾನ ಬಾರದಂತೆ ನೌಶೀನಾ ಎಂಬಾಕೆಯ ನೆರವಿನಲ್ಲಿ ಎಂಡಿಎಂಎ ಸಾಗಾಟ ಮಾಡುತ್ತಿರುವ ಮಾಹಿತಿಯನ್ನು ಕಲೆ ಹಾಕಿದ ಮಂಗಳೂರು ನಗರದ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿ ತಂಡವನ್ನು ದಸ್ತಗಿರಿ ಮಾಡಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿ ಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಈ ಸಂಬಂಧ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.





