ಕರಾವಳಿಕ್ರೈಂ

ವಿಟ್ಲ: ಅಂಗಡಿ ಶಟರ್’ನಲ್ಲಿ ‘Name jihad’ ಬರಹ



ವಿಟ್ಲ: ಅಂಗಡಿಯೊಂದರ ಶಟರ್ ನಲ್ಲಿ ಕಿಡಿಗೇಡಿಗಳು ‘Name jihad’ ಎಂದು ಬರೆದ ಘಟನೆ ವಿಟ್ಲ ಪೇಟೆಯ ಹೃದಯ ಭಾಗದಲ್ಲಿರುವ ದೀಪಕ್ ವಾಚ್ ವರ್ಕ್ಸ್ ನಲ್ಲಿ ನಡೆದಿದೆ.

ಅ.11ರಂದು ರಾತ್ರಿ ವೇಳೆ ಈ ಘಟನೆ ನಡೆದಿದ್ದು, ಅ.12ರಂದು ಅಂಗಡಿ ಮಾಲಕರು ಬಾಗಿಲು ತೆಗೆಯಲು ಬಂದು ನೋಡಿದಾಗ ಬರೆದಿರುವುದು ಬೆಳಕಿಗೆ ಬಂದಿದೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಅಂಗಡಿ ಮಾಲಕ ಅಬ್ದುಲ್ ಅವರು ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದು ಸಿಸಿ ಕ್ಯಾಮರಾ ಪರಿಶೀಲನೆ ನಡೆಸಿದಾಗ ಇಬ್ಬರು ಬರುತ್ತಿರುವುದು ಕಂಡು ಬಂದಿದೆ. ಈ ಬಗ್ಗೆ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!