ಸುಳ್ಯ: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
ಸುಳ್ಯ: ವಂಚನೆ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸುಳ್ಯ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಕಡೂರು ಗ್ರಾಮದ ನಿವಾಸಿ ನಾಗೇಶ್ ಬಂಧಿತ ಆರೋಪಿ.

ಸುಳ್ಯ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದ ಆರೋಪಿಯಾಗಿ, ಸುಮಾರು 4 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಸುಳ್ಯ ಪೊಲೀಸ್ ಠಾಣಾ ಸಿಬ್ಬಂದಿ ರಮೇಶ್ ಹಾಗೂ ಶ್ರೀಶೈಲ ಗುರುವಾರ ಬೆಂಗಳೂರಿನ ಚಿಕ್ಕಬಿದರಿಕಲ್ಲು ಎಂಬಲ್ಲಿ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.





