ಅಂತಾರಾಷ್ಟ್ರೀಯಕ್ರೈಂ

ಗಾಝಾ: ಇಸ್ರೇಲ್ ದಾಳಿಯಲ್ಲಿ ಕನಿಷ್ಠ 10 ಮಂದಿಗೆ ಗಾಯ



ಗಾಝಾ ಪಟ್ಟಿಯಲ್ಲಿ ಫೆಲೆಸ್ತೀನಿಯರ ವಸತಿ ಪ್ರದೇಶದ ಮೇಲೆ ಇಸ್ರೇಲ್ ಪಡೆ ನಡೆಸಿದ ಫಿರಂಗಿ ದಾಳಿಯಲ್ಲಿ ಕನಿಷ್ಠ 10 ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.

ಕದನ ವಿರಾಮ ಒಪ್ಪಂದದಡಿ ಗುರುತಿಸಲಾದ ‘ಹಳದಿ ರೇಖೆ’ಯ ಒಳಗೆ ನಡೆಸಿದ ಕಾರ್ಯಾಚರಣೆ ಸಂದರ್ಭ ಫಿರಂಗಿ ಗುಂಡನ್ನು ಹಾರಿಸಲಾಗಿದ್ದು ಅದು ಉದ್ದೇಶಿತ ಗುರಿಯನ್ನು ತಲುಪಿಲ್ಲ ಎಂದು ಇಸ್ರೇಲಿ ಮಿಲಿಟರಿ ಹೇಳಿದೆ. ಮಧ್ಯ ಗಾಝಾ ನಗರದ ಮೇಲೆ ನಡೆದ ದಾಳಿಯಲ್ಲಿ ಗಾಯಗೊಂಡ 10 ಮಂದಿ ಚಿಕಿತ್ಸೆಗೆ ದಾಖಲಾಗಿದ್ದು ಕೆಲವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.

Leave a Reply

Your email address will not be published. Required fields are marked *

error: Content is protected !!