ಜೀವ ಬೆದರಿಕೆ ಹಾಕಬಹುದು!! ಮಹೇಶ್ ಶೆಟ್ಟಿ ತಿಮರೋಡಿ ಸಹಿತ ಐವರ ವಿರುದ್ದ ದೂರು ನೀಡಿದ ಚಿನ್ನಯ್ಯ
ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣದಲ್ಲಿ ಜೈಲು ಸೇರಿ ಹೊರಬಂದಿರುವ ಚಿನ್ನಯ್ಯ ಇದೀಗ ಮಹೇಶ್ ಶೆಟ್ಟಿ ಹಾಗೂ ಇತರ ನಾಲ್ವರು ತಮಗೆ ಜೀವಬೆದರಿಕೆ ಹಾಕಬಹುದು ಆದ್ದರಿಂದ ತನಗೆ ರಕ್ಷಣೆ ನೀಡಬೇಕು ಎಂದು ಧರ್ಮಸ್ಥಳ ಪೊಲೀಸ್ ಠಾಣೆಗೆ ಹಾಜರಾಗಿ ದೂರು ಅರ್ಜಿ ಸಲ್ಲಿಸಿರುವ ಬಗ್ಗೆ ತಿಳಿದು ಬಂದಿದೆ.
ಧರ್ಮಸ್ಥಳ ಪ್ರಕರಣದಲ್ಲಿ ಆರೋಪಿಯಾಗಿ ಜೈಲು ಸೇರಿ ಡಿ.18 ರಂದು ಶಿವಮೊಗ್ಗ ಜೈಲಿನಿಂದ ಬಂದ ಚಿನ್ನಯ್ಯ ಡಿ.18ರಂದು ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರಾಗಿ ಮಹೇಶ್ ಶೆಟ್ಟಿ ತಿಮರೋಡಿ, ಜಯಂತ್. ಟಿ, ಸಮೀರ್ ಎಮ್.ಡಿ, ವಿಠಲ್ ಗೌಡ, ಗಿರೀಶ್ ಮಟ್ಟಣ್ಣವರ್ ಜೀವಬೆದರಿಕೆ ಹಾಕಬಹುದು ಆದ್ದರಿಂದ ತನಗೆ ಹಾಗೂ ತನ್ನ ಪತ್ನಿಗೆ ಸೂಕ್ತ ರಕ್ಷಣೆ ಕೊಡುವ ಬಗ್ಗೆ ಬೆಳ್ತಂಗಡಿ ಠಾಣೆಗೆ ಮನವಿ ನೀಡಿದ್ದಾರೆ. ಸದ್ರಿ ಮನವಿಯನ್ನು ಸ್ವೀಕರಿಸಿಕೊಂಡು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರರ್ಜಿ ದಾಖಲಿಸಲಾಗಿದ್ದು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ತಿಳಿಸಿದ್ದಾರೆ.




