‘ಗೃಹಲಕ್ಷ್ಮಿ’ ಹಣ: ಗುಡ್ ನ್ಯೂಸ್ ನೀಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ಬೆಳಗಾವಿ: ಗೃಹಲಕ್ಷ್ಮಿ ಹಣವನ್ನು ಫಲಾನುಭವಿಗಳ ಖಾತೆಗೆ ಸರ್ಕಾರ ಹಾಕಿಲ್ಲ ಎಂದು ಬೆಳಗಾವಿ ಅಧಿವೇಶನದಲ್ಲಿ ಆಡಳಿತ ಮತ್ತು ವಿಪಕ್ಷಗಳ ಮಧ್ಯೆ ಭಾರೀ ಚರ್ಚೆಯಾಗಿತ್ತು.

ಇದೀಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಇದೇ ಸೋಮವಾರದಿಂದ ಶನಿವಾರದ ಒಳಗಡೆ 24ನೇ ಕಂತು ಬಿಡುಗಡೆ ಆಗುತ್ತದೆ ಎಂದು ತಿಳಿಸಿದ್ದಾರೆ
ಬೆಳಗಾವಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಈಗಾಗಲೇ 24ನೇ ಕಂತಿನ ಹಣ ಬಿಡುಗಡೆಗೆ ಹಣಕಾಸು ಇಲಾಖೆ ಒಪ್ಪಿದೆ. ಮುಂದಿನ ವಾರ ಹಣ ಬಿಡುಗಡೆ ಆಗುತ್ತದೆ ಎಂದರು.



