ಕರಾವಳಿಕ್ರೈಂ

ಮಂಗಳೂರು: SDPI ಪ್ರತಿಭಟನಾ ಸಭೆಯ ವೀಡಿಯೊದಲ್ಲಿ ಸುಳ್ಳು ಮಾಹಿತಿ ಹರಡಿದ ಆರೋಪ- ಸ್ವಯಂಪ್ರೇರಿತ ದೂರು ದಾಖಲು

ಮಂಗಳೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಮಂಗಳೂರಿನಲ್ಲಿ ಆಯೋಜಿಸಿದ್ದ ಪ್ರತಿಭಟನಾ ಸಭೆಯ ವೀಡಿಯೊ ತುಣುಕುಗಳು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾದ ನಂತರ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿದ್ದಾರೆ.


ಡಿ.19ರಂದು ಮಂಗಳೂರಿನಲ್ಲಿ ನಡೆದ ಎಸ್‌.ಡಿ.ಪಿ.ಐ ಪ್ರತಿಭಟನಾ ಸಭೆಯ ವಿಡಿಯೊ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗಿದ್ದು, ಸದ್ರಿ ವಿಡಿಯೊ ತುಣುಕುಗಳನ್ನು ಪರಿಶೀಲಿಸಿದಾಗ ಹಲವು ಸುಳ್ಳು ಮಾಹಿತಿಗಳನ್ನು ಹಾಗೂ ನ್ಯಾಯಾಲಯಗಳ ಕೆಲವು ತೀರ್ಪುಗಳ ಆಯ್ದ ಭಾಗವನ್ನು ಮಾತ್ರ ಸಾರ್ವಜನಿಕರಿಗೆ ತಿಳಿಸಿ, ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿಸಲು ಯತ್ನಿಸಿರುವುದು ಕಂಡುಬಂದಿರುತ್ತದೆ. ಈ ಹಿನ್ನೆಲೆಯಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ದೂರರ್ಜಿಯನ್ನು ದಾಖಲಿಸಿಕೊಳ್ಳಲಾಗಿದ್ದು, ವಿಚಾರಣೆ ನಡೆಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು  ಎಂದು ಪೊಲೀಸ್ ಇಲಾಖೆ ಪ್ರಕಟನೆಯಲ್ಲಿ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!