ಕರಾವಳಿಕ್ರೈಂ

ಅಕ್ರಮ ಜೂಜಾಟ ನಡೆಯುತ್ತಿದ್ದ ಸ್ಥಳಕ್ಕೆ ಪೊಲೀಸ್ ದಾಳಿ, ಹಲವರ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ : ಅಕ್ರಮವಾಗಿ ಜೂಜಾಟ(ಉಲಾಯಿ-ಪಿದಾಯಿ) ಆಡುತ್ತಿದ್ದ ಲಾಡ್ಜ್ ಮೇಲೆ ಬೆಳ್ತಂಗಡಿ ವೃತ್ತ‌ ನಿರೀಕ್ಷಕ ರವಿ.ಬಿ.ಎಸ್ ನೇತೃತ್ವದಲ್ಲಿ ಧರ್ಮಸ್ಥಳ ಪೊಲೀಸರು ದಾಳಿ ಮಾಡಿ 11 ಮಂದಿಯನ್ನು ಬಂಧಿಸಿ 13 ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.



ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಕನ್ಯಾಡಿ ಬಳಿಯ ಖಾಸಗಿ ಲಾಡ್ಜ್ ನಲ್ಲಿ ಅಕ್ರಮವಾಗಿ ಜನ ಸೇರಿ ಜೂಜಾಟ ಇಸ್ಪೀಟ್(ಅಂದರ್ ಬಾಹರ್) ಆಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಡಿ.22 ರಂದು ರಾತ್ರಿ 7:40 ಕ್ಕೆ ಲಾಡ್ಜ್ ಮೇಲೆ ಬೆಳ್ತಂಗಡಿ ವೃತ್ತ‌ ನಿರೀಕ್ಷಕ ರವಿ.ಬಿ.ಎಸ್ ನೇತೃತ್ವದಲ್ಲಿ ಧರ್ಮಸ್ಥಳ ಪೊಲೀಸರು ದಾಳಿ ಮಾಡಿದ್ದಾರೆ.

ದಾಳಿ ವೇಳೆ  ಜೂಜಾಟದ ಎಲೆಗಳನ್ನು ವಶಕ್ಕೆ ಪಡೆಯಲಾಗಿದೆ. ಜೂಜಾಟ ಆಡುತ್ತಿದ್ದ ಒಟ್ಟು 13 ಮಂದಿ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!