ಕ್ರೈಂರಾಜ್ಯ

ಮೈಸೂರು ಅರಮನೆ ಮುಂಭಾಗದಲ್ಲಿ ನೈಟ್ರೋಜನ್ ಗ್ಯಾಸ್ ಸ್ಫೋಟ; ಓರ್ವ ಸಾವು, ಮೂವರು ಗಂಭೀರ

ಮೈಸೂರು: ನೈಟ್ರೋಜನ್ ಗ್ಯಾಸ್ ಸ್ಫೋಟಗೊಂಡು ಓರ್ವ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿಶ್ವವಿಖ್ಯಾತ ಮೈಸೂರು ಅರಮನೆ ಮುಂಭಾಗದಲ್ಲಿ ನಡೆದಿದೆ.

ಡಿಸೆಂಬರ್ 25ರಂದು ರಾತ್ರಿ ಪ್ಯಾಲೆಸ್ ಮುಂಭಾಗ ಬಲೂನ್ ಗೆ ಗ್ಯಾಸ್ ತುಂಬಿಸುವಾಗ ಸ್ಫೋಟವಾಗಿದ್ದು, ಇದರ ತೀವ್ರತೆಗೆ ಸಿಲಿಂಡರ್ ಛಿದ್ರ ಛೀದ್ರವಾಗಿದೆ.


ಬಲೂನ್‌ಗೆ ಗ್ಯಾಸ್ ತುಂಬುವ ವೇಳೆ ಬ್ಲಾಸ್ಟ್ ಆಗಿದೆ. ಬ್ಲಾಸ್ಟ್ ತೀವ್ರತೆಗೆ ಓರ್ವನ ದೇಹ ಛಿದ್ರ ಛಿದ್ರಗೊಂಡಿದೆ. ಇನ್ನು ಘಟನೆಯಲ್ಲಿ ಮೂವರಿಗೆ ಗಂಭೀರವಾಗಿ ಗಾಯಗಳಾಗಿದ್ದು, ಈ ಪೈಕಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ.

Leave a Reply

Your email address will not be published. Required fields are marked *

error: Content is protected !!