ಕರಾವಳಿ

ಪುತ್ತೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಆಯ್ಕೆ



ಪುತ್ತೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪುತ್ತೂರು ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ಸುಧಾಕರ ಸುವರ್ಣ ತಿಂಗಳಾಡಿ, ಪ್ರಧಾನ ಕಾರ್ಯದರ್ಶಿಯಾಗಿ ಸಿ.ಶೇ. ಕಜೆಮಾರ್ ಹಾಗೂ ಕೋಶಾಧಿಕಾರಿಯಾಗಿ ಸಂಶುದ್ದೀನ್ ಸಂಪ್ಯ ಮುಂದಿನ 3 ವರ್ಷಗಳ ಅವಧಿಗೆ ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷರಾಗಿ ಕರುಣಾಕರ ರೈ ಸಿ.ಎಚ್, ಎಂ.ಸರ್ವೇಶ್ ಭಟ್, ಕಾರ್ಯದರ್ಶಿಗಳಾಗಿ ಅಜಿತ್ ಕುಮಾರ್, ನಝೀರ್ ಕೊಯಿಲ ಆಯ್ಕೆಯಾದರು.
ಕಾರ್ಯಕಾರಿ ಸಮಿತಿ ಸದಸ್ಯರಾಗಿ ಶಶಿಧರ ರೈ ಕುತ್ಯಾಳ, ಮೇಘ ಪಾಲೆತ್ತಡಿ, ಶೇಖ್ ಜೈನುದ್ದೀನ್, ಲೋಕೇಶ್ ಬನ್ನೂರು, ಕೃಷ್ಣಪ್ರಸಾದ್ ಬಲ್ನಾಡು, ಉಮಾಶಂಕರ್, ರಾಜೇಶ್ ಪಟ್ಟೆ ಮತ್ತು ಶರತ್ ಬಪ್ಪಳಿಗೆ ಆಯ್ಕೆಯಾದರು.


ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ನಿರ್ದೇಶನದಂತೆ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಪುತ್ತೂರು ಪತ್ರಿಕಾ ಭವನದಲ್ಲಿ ಬುಧವಾರ ಚುನಾವಣೆ ಪ್ರಕ್ರಿಯೆ ನಡೆಸಲಾಯಿತು. ಜಿಲ್ಲಾ ಸಂಘದ ಕೋಶಾಧಿಕಾರಿ ವಿಜಯ ಕೋಟ್ಯಾನ್ ಪಡು ಚುನಾವಣಾಧಿಕಾರಿಯಾಗಿದ್ದರು. ಜಿಲ್ಲಾ ಸಂಘದ ಪ್ರಧಾನ ಕಾರ್ಯದರ್ಶಿ ರಾಜೇಶ್ ಪೂಜಾರಿ ಸಹಕರಿಸಿದರು. ಎಲ್ಲಾ ಹುದ್ದೆಗಳಿಗೂ ಒಂದೊಂದೇ ನಾಮಪತ್ರ ಸಲ್ಲಿಕೆಯಾದ ಕಾರಣ ಚುನಾವಣಾಧಿಕಾರಿಗಳು ಎಲ್ಲರೂ ಅವಿರೋಧವಾಗಿ ಆಯ್ಕೆಯಾಗಿರುವುದಾಗಿ ಘೋಷಿಸಿ ಪ್ರಮಾಣಪತ್ರ ವಿತರಿಸಿದರು.

ನಿರ್ಗಮನ ಅಧ್ಯಕ್ಷ ಸಿದ್ದೀಕ್ ನೀರಾಜೆ, ನಿರ್ಗಮನ ಪ್ರಧಾನ ಕಾರ್ಯದರ್ಶಿ ಶಶಿಧರ ರೈ ಕುತ್ಯಾಳ, ನೂತನ ಅಧ್ಯಕ್ಷ ಸುಧಾಕರ ಸುವರ್ಣ ಮತ್ತು ನೂತನ ಪ್ರಧಾನ ಕಾರ್ಯದರ್ಶಿ ಸಿ.ಶೇ. ಕಜೆಮಾರ್ ಮಾತನಾಡಿದರು.

Leave a Reply

Your email address will not be published. Required fields are marked *

error: Content is protected !!