ಕರಾವಳಿಕ್ರೈಂ

ಗಾಂಜಾ ಮಾರಾಟ: ಆರೋಪಿ ಪೊಲೀಸ್ ವಶಕ್ಕೆ



ಉಳ್ಳಾಲ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಓರ್ವನನ್ನು ಉಳ್ಳಾಲ ಪೊಲೀಸರು ತಲಪಾಡಿ ರೈಲ್ವೇ ಟ್ರ್ಯಾಕ್ ಬಳಿಯ ಕಲ್ಪನೆ ಎಂಬಲ್ಲಿ ಬಂಧಿಸಿದ್ದಾರೆ.
ಉತ್ತರ ಪ್ರದೇಶದ ಹಸ್ಟೋಯಿ ಜಿಲ್ಲೆಯ ಜೂರಿ ಚಂದ್ರಾಪುರ್ ನಿವಾಸಿ ರಾಜ್ ಪಾಲ್ ಬಂಧಿತ ಆರೋಪಿ.

ತನ್ನ ಊರಿನಿಂದ ಗಾಂಜಾ ತಂದು ಹಣಕ್ಕಾಗಿ ಗ್ರಾಹಕರಿಗೆ ಮಾರಾಟ ಮಾಡುತ್ತಿದ್ದ ಈತನ ಬಗ್ಗೆ ಮಾಹಿತಿ ಪಡೆದ ಪೊಲೀಸರು ಮಂಗಳವಾರ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿ 21 ಸಾವಿರ ರೂ. ಮೌಲ್ಯದ 425 ಗ್ರಾಂ ಗಾಂಜಾ, 650 ರೂ. ನಗದು ಹಾಗೂ ಒಂದು ಮೊಬೈಲ್ ಫೋನ್ ವಶಪಡಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!