ಕೇರಳಿಗರೊಂದಿಗೆ ಉತ್ತಮ ಬಾಂಧವ್ಯವಿದೆ, ನನ್ನ ಹೇಳಿಕೆಯನ್ನು ತಿರುಚಬೇಡಿ: ಡಿಕೆ.ಶಿವಕುಮಾರ್
ಬೆಂಗಳೂರು: ಕೇರಳ ಸಿಎಂ ಕರ್ನಾಟಕ ಸರ್ಕಾರದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು ಎಂದು ಹೇಳಿದ್ದೇನೆಯೇ ಹೊರತು, ಕೇರಳಿಗರ ಬಗ್ಗೆ ನಾನು ಮಾತನಾಡಿಲ್ಲ. ಬಿಜೆಪಿ ನಾಯಕ ರಾಜೀವ್ ಚಂದ್ರಶೇಖರ್ ಅವರು ನನ್ನ ಹೇಳಿಕೆಯನ್ನು ತಿರುಚುತ್ತಿದ್ದು, ಜನರ ದಾರಿ ತಪ್ಪಿಸುತ್ತಿದ್ದಾರೆಂದು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅಸಮಾಧಾನ ಹೊರಹಾಕಿದ್ದಾರೆ.

ಕೇರಳದ ಜನರು ಹಾಗೂ ನನ್ನ ನಡುವೆ ಉತ್ತಮ ಬಾಂಧವ್ಯವಿದೆ. ಕೇರಳ ಜನ ನನ್ನನ್ನು ಬಹಳ ಪ್ರೀತಿಸುತ್ತಾರೆ. ನನಗೂ ಅವರ ಮೇಲೆ ಗೌರವವಿದೆ. ಕೇರಳ ಚುನಾವಣೆ ಪ್ರಚಾರಕ್ಕೆ ನಾನು ಹೋಗುತ್ತೇನೆ. ಅಲ್ಲಿ ನಮ್ಮ ಸರ್ಕಾರ ಬರಲಿದೆ. ಹೀಗಾಗಿ ಬಿಜೆಪಿಯವರು ಗೊಂದಲ ಸೃಷ್ಟಿಸಲು ಮುಂದಾಗಿದ್ದಾರೆ. ಬಿಜೆಪಿಗರು ಈ ರೀತಿ ಹುಳಿ ಹಿಂಡುವ ಕೆಲಸ ಮಾಡಬಾರದು ಎಂದು ಡಿಕೆಶಿ ಹೇಳಿದರು.




