ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ದಿ ವಿಚಾರದಲ್ಲಿ ಸಭೆ
ಪುತ್ತೂರು: ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ದಿ ವಿಚಾರಕ್ಕೆ ಸಂಬಂದಿಸಿದಂತೆ ಶಾಸಕ ಅಶೋಕ್ ರೈ ನೇತೃತ್ವದಲ್ಲಿ ವ್ಯವಸ್ಥಾಪನಾ ಸಮಿತಿ ಸಭೆಯು ದೇವಳದ ಕಚೇರಿಯಲ್ಲಿ ನಡೆಯಿತು.

ಸಭೆಯಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರಭಟ್, ಸಮಿತಿ ಸದಸ್ಯರಾದ ಈಶ್ವರ ನಾಯ್ಕ, ನಳಿನಿ ಪಿ ಶೆಟ್ಟಿ, ದಿನೇಶ್ ಕುಲಾಲ್ ಪಿ ವಿ, ಮಹಾಬಲ ರೈ ವಳತ್ತಡ್ಕ, ಸುಬಾಸ್ ರೈ ಬೆಳ್ಳಿಪ್ಪಾಡಿ, ವಿನಯಕುಮಾರ್ ಪಿ, ಮೆನೇಜರ್ ಹರೀಶ್ ಕುಮಾರ್ ಉಪಸ್ಥಿತರಿದ್ದರು. ಸಭೆಯಲ್ಲಿ ದೇವಸ್ಥಾನದ ಅಭಿವೃದ್ದಿಯ ಕುರಿತು ಚರ್ಚೆ ನಡೆಯಿತು.





