ಕರಾವಳಿ

ನಿಟ್ಟೆ ಸಮೂಹ ಶಿಕ್ಷಣ ಸಂಸ್ಥೆಗಳ  ಅಧ್ಯಕ್ಷ ಎನ್ ವಿನಯ ಹೆಗ್ಡೆ ನಿಧನ


ಮಂಗಳೂರು: ನಿಟ್ಟೆ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ. ಎನ್.ವಿನಯ ಹೆಗ್ಡೆ(86) ಗುರುವಾರ ಬೆಳಗಿನ ಜಾವ ನಿಧನರಾದರು. ರಾಜ್ಯದ ಪ್ರಮುಖ ಶಿಕ್ಷಣ ತಜ್ಞರು, ಉದ್ಯಮಿ ಮತ್ತು ಸಮಾಜ ಸೇವಕರಾಗಿ ಅವರು ಗುರುತಿಸಿಕೊಂಡಿದ್ದರು.

  ನಿಟ್ಟೆ ಶಿಕ್ಷಣ ಸಂಸ್ಥೆಗಳ ವಿಸ್ತರಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಇವರು ರಾಜ್ಯೋತ್ಸವ ಪ್ರಶಸ್ತಿ ಮತ್ತು ಗೌರವ ಡಾಕ್ಟರೇಟ್ ಸೇರಿದಂತೆ ಹಲವು ಗೌರವಗಳಿಗೆ ಪಾತ್ರರಾಗಿದ್ದರು. 1979ರಲ್ಲಿ ‘ನಿಟ್ಟೆ ಎಜುಕೇಶನ್ ಟ್ರಸ್ಟ್’ ಸ್ಥಾಪಿಸಿದರು. ಇಂದು ನಿಟ್ಟೆ ಶಿಕ್ಷಣ ಸಂಸ್ಥೆಗಳು ಮಂಗಳೂರು, ಬೆಂಗಳೂರು ಮತ್ತು ನಿಟ್ಟೆಯಲ್ಲಿ 40ಕ್ಕೂ ಹೆಚ್ಚು ವಿದ್ಯಾಸಂಸ್ಥೆಗಳನ್ನು ಹೊಂದಿವೆ. ಇದರಲ್ಲಿ ವೈದ್ಯಕೀಯ, ಎಂಜಿನಿಯರಿಂಗ್, ದಂತವೈದ್ಯಕೀಯ, ಫಾರ್ಮಸಿ ಮತ್ತು ಮ್ಯಾನೇಜ್‌ಮೆಂಟ್ ಕಾಲೇಜುಗಳು ಸೇರಿವೆ. ಪ್ರಸ್ತುತ ಅವರು ಮಂಗಳೂರಿನ ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಕುಲಪತಿಯಾಗಿದ್ದರು.

Leave a Reply

Your email address will not be published. Required fields are marked *

error: Content is protected !!