ಬೆಳ್ತಂಗಡಿ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ
ಬೆಳ್ತಂಗಡಿ: ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಓಡಿಲ್ನಾಳ ಗ್ರಾಮದ ಕಟ್ಟದ ಬೈಲ್ ನಿವಾಸಿ
ಮಂಜುನಾಥ ನಾಯಕ್ (42ವ) ಅವರು ತಮ್ಮ ಮನೆಯ ಕೊಠಡಿಯ ಒಳಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜ.1ರಂದು ನಡೆದಿದೆ.
ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ ಯಾಗಿದ್ದು ಘಟನೆಯ ಬಗ್ಗೆ ಬೆಳ್ತಂಗಡಿ ಪೊಲೀಸರಿಗೆ ಮಾಹಿತಿ ನೀಡಿದ್ದು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣದಾಖಲಿಸಿಕೊಂಡಿದ್ದಾರೆ. ಆತ್ಮಹತ್ಯೆ ಗೆ ಕಾರಣ ತಿಳಿದು ಬಂದಿಲ್ಲ


