ಕರಾವಳಿ

ಪೆರ್ನೆ: ಬ್ಯಾಂಕ್‌ ಸಿಬ್ಬಂದಿ ನಾಪತ್ತೆ ಪ್ರಕರಣಕ್ಕೆ ತಿರುವು

ಬ್ಯಾಂಕ್‌ಗೆ ಲಕ್ಷಾಂತರ ರೂ. ವಂಚನೆ ಆರೋಪ: ಪ್ರಕರಣ ದಾಖಲು



ಉಪ್ಪಿನಂಗಡಿ: ಪೆರ್ನೆ ಎಂಬಲ್ಲಿನ ಬ್ಯಾಂಕ್ ಆಫ್ ಬರೋಡಾ ಶಾಖೆಯಲ್ಲಿ ಉಪ ಶಾಖಾ ಪ್ರಬಂಧಕರಾಗಿ ಕಾರ್ಯನಿರ್ವಹಿಸುತ್ತಿದ್ದ ಪುಲುಗುಜ್ಜು ಸುಬ್ರಹ್ಮಣ್ಯಂ (30) ಎಂಬವರ ನಾಪತ್ತೆ ಪ್ರಕರಣ ತಿರುವು ಪಡೆದುಕೊಂಡಿದೆ.


ನಾಪತ್ತೆಯಾಗಿರುವ ಬ್ಯಾಂಕ್ ಉದ್ಯೋಗಿ ತಾನು ಕರ್ತವ್ಯ ನಿರ್ವಹಿಸುತ್ತಿದ್ದ ಬ್ಯಾಂಕ್‌ ಗೆ 71.41 ಲಕ್ಷ ರೂ. ವಂಚನೆ ನಡೆಸಿರುವ ಬಗ್ಗೆ ಬ್ಯಾಂಕ್ ಆಫ್ ಬರೋಡಾದ ಮಂಗಳೂರು ಪ್ರಾದೇಶಿಕ ವ್ಯವಸ್ಥಾಪಕ ಸಿ.ವಿ.ಎಸ್. ಚಂದ್ರಶೇಖರ್ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ.

ಪೆರ್ನೆ ಶಾಖೆಯಲ್ಲಿ ಜಂಟಿ ವ್ಯವಸ್ಥಾಪಕರಾಗಿಕೆಲಸ ಮಾಡುತ್ತಿದ್ದ ಸುಬ್ರಹ್ಮಣ್ಯಂ ಸದ್ರಿ ಬ್ರಾಂಚ್‌ನ ಎಟಿಎಂ ನ ಮೇಲ್ವಿಚಾರಣೆಯನ್ನು ನೋಡಿಕೊಳ್ಳುತ್ತಿದ್ದ. 2024ರ ಫೆಬ್ರವರಿ 6ರಿಂದ 2025ರ ಡಿಸೆಂಬರ್ 16ರ ಅವಧಿಯಲ್ಲಿ ಆರೋಪಿಯು ಅದೇ ಬ್ಯಾಂಕಿನ ಎಟಿಎಂಗೆ ಪ್ರತಿ ದಿನ ನಿಗದಿ ಪಡಿಸಿದ ಹಣವನ್ನು ಜಮಾ ಮಾಡದೆ ಕಡಿಮೆ ನಗದು ಜಮಾ ಮಾಡಿ ಸತತವಾಗಿ ಬ್ಯಾಂಕಿನ ಹಣವನ್ನು ದುರುಪಯೋಗಪಡಿಸಿಕೊಂಡು ಒಟ್ಟು 70,86,000 ರೂ. ಗಳನ್ನು ವಂಚನೆ ಮಾಡಿದ್ದಾನೆ ಹಾಗೂ ಸೇಫ್ ಲಾಕರ್‌ನ್ನು ಪರಿಶೀಲಿಸಿದಾಗ 4.400 ಗ್ರಾಂ ತೂಕದ 55,000 ರೂ. ಅಂದಾಜು ಮೌಲ್ಯದ 1 ಪ್ಯಾಕೆಟ್ ಚಿನ್ನವನ್ನು ಎಗರಿಸಿ ವಂಚಿಸಿದ್ದಾನೆ ಎಂದು ಆರೋಪಿಸಿದ್ದಾರೆ. ಈ ಮೂಲಕ ಬ್ಯಾಂಕಿಗೆ ನಂಬಿಕೆ ದ್ರೋಹ ಮಾಡಿ ಒಟ್ಟು 71,41,000 ರೂ. ವಂಚನೆ ಮಾಡಿರುವುದಾಗಿ ದೂರಲಾಗಿದೆ.
ಈ ಬಗ್ಗೆ ಉಪ್ಪಿನಂಗಡಿ ಪೊಲೀಸರು ವಂಚನೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!