ಕರಾವಳಿರಾಜಕೀಯ

ಕೆಪಿಸಿಸಿ ಕಾರ್ಮಿಕ ಘಟಕದ ರಾಜ್ಯ ಕಾರ್ಯದರ್ಶಿಯಾಗಿ ಹನೀಫ್ ಪೆರ್ಲಾಪು ಆಯ್ಕೆ



ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಇದರ ಕಾರ್ಮಿಕ ಘಟಕದ ರಾಜ್ಯ ಕಾರ್ಯದರ್ಶಿಯಾಗಿ ಬಂಟ್ವಾಳ ಕ್ಷೇತ್ರದ ಪೆರ್ಲಾಪಿನ ಉದ್ಯಮಿ ಹನೀಫ್ ಪೆರ್ಲಾಪು ಅವರನ್ನು ಕೆಪಿಸಿಸಿ ರಾಜ್ಯ ಕಾರ್ಮಿಕ ಘಟಕದ ಅಧ್ಯಕ್ಷರಾದ ಪುಟ್ಟಸ್ವಾಮಿ ಗೌಡ ಅವರು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನೇಮಕಾತಿ ಮಾಡಿ ಆದೇಶ ಪತ್ರ ವಿತರಿಸಿದರು.


ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಮಾರ್ಗದರ್ಶನದಂತೆ ಜವಾಬ್ದಾರಿಯನ್ನು ನಿಷ್ಠೆಯಿಂದ ನಿರ್ವಹಿಸಿ, ಪಕ್ಷ ಸಂಘಟನೆಗೆ ಹಾಗೂ ಕಾರ್ಮಿಕರ ಏಳಿಗೆಗಾಗಿ ಶ್ರಮಿಸುವಂತೆ ಸೂಚಿಸಲಾಗಿದೆ.
ಈ ವೇಳೆ ರಾಜ್ಯ ಉಪಾಧ್ಯಕ್ಷರಾದ ಶ್ರೀಮತಿ ಹರಿಣಿ ಗೌಡ, ಸರ್ಕಾರಿ ಮುಖ್ಯ ಸಚೇತಕರ ಆಪ್ತ ಕಾರ್ಯದರ್ಶಿ ಸಾದಿಕ್ ಬರೆಪ್ಪಾಡಿ, ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಉನೈಸ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!