ಕರಾವಳಿಕ್ರೈಂ

ಮಂಗಳೂರು: ಗಾಂಜಾ ಮಾರಾಟಕ್ಕೆ ಯತ್ನ; ಇಬ್ಬರು ಆರೋಪಿಗಳ ಬಂಧನ

ಮಂಗಳೂರು: ಮಾದಕ ವಸ್ತು ಗಾಂಜಾವನ್ನು ಬಿಹಾರ ರಾಜ್ಯದಿಂದ ರೈಲು ಮೂಲಕ ಮಂಗಳೂರಿಗೆ ತಂದು ಮಾರಾಟ ಮಾಡಲು ಯತ್ನಿಸಿದ ಅಂತಾರಾಜ್ಯ ಆರೋಪಿತರನ್ನು ಬಜಪೆ ಪೊಲೀಸರು ಬಂಧಿಸಿದ್ದಾರೆ. ಬಿಹಾರದ ಖಗರಿಯಾ ನಿವಾಸಿ ಸುನೀಲ್ ಕುಮಾರ್(40) ಮತ್ತು ಉತ್ತರಪ್ರದೇಶದ ಚುನಾರ್ ಮಿರ್ಝಾಪುರ್ ನಿವಾಸಿ ಬ್ರಿಜೇಶ್ ಶ್ರೀವಾಸ್ತವ್(42) ಬಂಧಿತ ಆರೋಪಿಗಳು.



ಪ್ರಸ್ತುತ ಕೃಷ್ಣಾಪುರ ಕಾಟಿಪಳ್ಳದಲ್ಲಿ ವಾಸವಾಗಿದ್ದ ಆರೋಪಿಗಳು ಜನವರಿ 3ರಂದು ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಶಾಂತಿಗುಡ್ಡೆ ಕ್ರಾಸ್ ಬಳಿ ರಸ್ತೆಯ ಬದಿಯಲ್ಲಿ ಸುಮಾರು 1 ಕೆ.ಜಿ ತೂಕದ ಮಾದಕವಸ್ತು ಗಾಂಜಾವನ್ನು ವಶದಲ್ಲಿರಿಸಿಕೊಂಡು ಅಕ್ರಮವಾಗಿ ಮಾರಾಟ ಮಾಡಲೆತ್ನಿಸುತ್ತಿದ್ದರು. ಈ ಬಗ್ಗೆ ಲಭಿಸಿದ ಖಚಿತ ಮಾಹಿತಿ ಮೇರೆಗೆ ಬಜಪೆ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.


ಬಂಧಿತರಿಂದ ಸುಮಾರು 1 ಕೆ.ಜಿ ಮಾದಕ ವಸ್ತು ಗಾಂಜಾವನ್ನು ಸ್ವಾಧೀನಪಡಿಸಿಕೊಂಡಿರುತ್ತಾರೆ. ಆರೋಪಿತರನ್ನು ವಿಚಾರಣೆ ನಡೆಸಿದಾಗ ಮಾದಕ ವಸ್ತು ಗಾಂಜಾವನ್ನು ಬಿಹಾರ ರಾಜ್ಯದಲ್ಲಿ ಖರೀದಿಸಿ ರೈಲಿನಲ್ಲಿ ಮಂಗಳೂರಿಗೆ ತಂದು ಉತ್ತರ ಭಾರತದ ಕೂಲಿ ಕಾರ್ಮಿಕರಿಗೆ ಮಾರಾಟ ಮಾಡುತ್ತಿರುವುದಾಗಿ ತಿಳಿಸಿರುತ್ತಾರೆ.
ಈ ಬಗ್ಗೆ ಬಜಪೆ ಪೊಲೀಸರು ಮೊ.ನಂ 08-2026 ಕಲಂ (c), 20(b)(ii)(a) NDPS Act ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿರುತ್ತಾರೆ.

Leave a Reply

Your email address will not be published. Required fields are marked *

error: Content is protected !!