ಕುಂತೂರು: ಬಸ್‌ನಿಂದ ಬಿದ್ದ ಪ್ರಯಾಣಿಕ ಮೃತ್ಯು
ಕಡಬ: ಬಸ್‌ನಿಂದ ಇಳಿಯುತ್ತಿದ್ದ ವೇಳೆ ಹೊರಕ್ಕೆಸೆಯಲ್ಪಟ್ಟಿದ್ದ ಪ್ರಯಾಣಿಕ ಮೃತಪಟ್ಟ ಘಟನೆ ಶನಿವಾರ ರಾತ್ರಿ ಕಡಬ ತಾಲೂಕಿನ ಕುಂತೂರು ಎಂಬಲ್ಲಿ ನಡೆದಿದೆ.
ಕಡಬ ತಾಲೂಕು ಪೆರಾಬೆ ಗ್ರಾಮದ ಬೇಳ್ವಾಡಿ ನಿವಾಸಿ ಬಾಬು (65) ಮೃತಪಟ್ಟವರು.

ಇವರು ಕೆಎಸ್ಸಾರ್ಟಿಸಿ ಬಸ್ಸಿನಿಂದ ಇಳಿಯುತ್ತಿದ್ದ ವೇಳೆ ಚಾಲಕ ಹಠಾತ್ ಬಸ್ಸನ್ನು ಚಲಾಯಿಸಿದ ಪರಿಣಾಮ ಬಸ್ಸಿನಿಂದ ರಸ್ತೆಗೆ
ಎಸೆಯಲ್ಪಟ್ಟಿದ್ದಾರೆನ್ನಲಾಗಿದೆ
ಘಟನೆಯಲ್ಲಿ ಗಂಭೀರ ಗಾಯಗೊಂಡ ಬಾಬುರನ್ನು ಉಪ್ಪಿನಂಗಡಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ಕೊಡಿಸಿ, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಜಿಲ್ಲಾ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಘಟನೆಗೆ ಸಂಬಂಧಿಸಿ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




