ಉಪ್ಪಿನಂಗಡಿ: ಬಾಲಕಿಯ ಮಾನಭಂಗಕ್ಕೆ ಯತ್ನ, ದೂರು
ಉಪ್ಪಿನಂಗಡಿ: ಅಪ್ರಾಪ್ತ ವಯಸ್ಸಿನ ಬಾಲಕಿಯ ಮಾನಭಂಗಕ್ಕೆ ಯತ್ನಿಸಿದ ಆರೋಪದಲ್ಲಿ ವ್ಯಕ್ತಿಯೊಬ್ಬನ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನೆಲ್ಯಾಡಿ ಗ್ರಾಮದ ಕಟ್ಟೆಮಜಲು ಎಂಬಲ್ಲಿ ನೇಮೋತ್ಸವಕ್ಕೆ ಹೋಗಿದ್ದ ಬಾಲಕಿ ಬಹಿರ್ದೆಸೆಗೆ ತೆರಳಿದ್ದ ವೇಳೆ ಆರೋಪಿ ಚಂದ್ರಶೇಖರ್ ಎಂಬಾತ ಕೈ ಹಿಡಿದು ಎಳೆದು ಮಾನಭಂಗಕ್ಕೆ ಯತ್ನಿಸಿದ್ದನೆನ್ನಲಾಗಿದೆ.
ಈ ಬಗ್ಗೆ ಬಾಲಕಿಯ ತಂದೆ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿಕೊಂಡಿರುವ ಉಪ್ಪಿನಂಗಡಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.



