ಜ.26: ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ದಿನಾಚರಣೆಗೆ ದಕ
ಜಿಲ್ಲೆಯಿಂದ ವಿಶೇಷ ಆಹ್ವಾನಿತರಾಗಿ ಒಳಮೊಗ್ರು ಗ್ರಾಪಂ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರು ಆಯ್ಕೆ
ಪುತ್ತೂರು: ನವದೆಹಲಿಯಲ್ಲಿ ಜ.26ರಂದು ನಡೆಯುವ ರಾಷ್ಟ್ರೀಯ ಗಣರಾಜ್ಯೋತ್ಸವ ದಿನಾಚರಣೆ ಸಮಾರಂಭದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ವತಿಯಿಂದ ಆಯ್ದ ಗ್ರಾಮ ಪಂಚಾಯಿತಿಗಳ ವಿಶೇಷ ಆಹ್ವಾನಿತರ ಆಯ್ಕೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಒಳಮೊಗ್ರು ಗ್ರಾಮ ಪಂಚಾಯತ್ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರು ಆಯ್ಕೆಯಾಗಿದ್ದಾರೆ.

ಜಲ ಜೀವನ್ ಮಿಷನ್ ಹಾಗೂ ಸ್ವಚ್ಛ ಭಾರತ್ ಮಿಷನ್(ಗ್ರಾಮೀಣ)ಯೋಜನೆಯಡಿ ಉತ್ತಮವಾಗಿ ಕಾರ್ಯನಿರ್ವಹಿನಿದ ಗ್ರಾಮ ಪಂಚಾಯಿತಿಗಳ ಪೈಕಿ ಇದರಲ್ಲಿ ಕರ್ನಾಟಕ ರಾಜ್ಯದಿಂದ ಒಟ್ಟು 5 ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು ಅಥವಾ ಗ್ರಾಮ ನೀರು ನೈರ್ಮಲ್ಯ ಸಮಿತಿ ಅಧ್ಯಕ್ಷರನ್ನು ಹಾಗೂ ಅವರ ಸಂಬಂಧಿಕರನ್ನು ನೇಮಿಸಲು ಗುರಿ ನಿಗದಿಪಡಿಸಿದ್ದು ಇದರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ತ್ರಿವೇಣಿ ಪಲ್ಲತ್ತಾರುರವರು ಆಯ್ಕೆಯಾಗಿದ್ದಾರೆ. ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸೂಚನೆಯಂತೆ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಾಗಿದ್ದು ಜ.24ರಂದು ದೆಹಲಿಗೆ ಪ್ರಯಾಣ ಮಾಡಬೇಕಾಗಿದೆ.




