‘ಕನ್ನಡ ಶಾಲೆ ಉಳಿಸಿ ಬೆಳೆಸಿ ಅಭಿಯಾನ’ದ ರಾಜ್ಯ ಗೌರವಾಧ್ಯಕ್ಷರಾಗಿ ಮುಹಮ್ಮದ್ ಕುಕ್ಕುವಳ್ಳಿ ಆಯ್ಕೆ
ಪುತ್ತೂರು: ಕನ್ನಡ ಶಾಲೆ ಉಳಿಸಿ ಬೆಳೆಸಿ ಅಭಿಯಾನದ ರಾಜ್ಯ ಸಮಿತಿಯ ಗೌರವಾಧ್ಯಕ್ಷರಾಗಿ ಮುಹಮ್ಮದ್ ಕುಕ್ಕುವಳ್ಳಿ ಆಯ್ಕೆಯಾಗಿದ್ದಾರೆ.

ದ.ಕ ಜಿಲ್ಲಾ ರಾಜ್ಯೋತ್ಸವ ಪುರಸ್ಕೃತರೂ ಆಗಿರುವ ಮುಹಮ್ಮದ್ ಕುಕ್ಕುವಳ್ಳಿ ಅವರು ‘ಸೂರಿಲ್ಲದವರಿಗೊಂದು ಆಸರೆ’ ಯೋಜನೆ ಮೂಲಕ ನೂರಾರು ಬಡ ಕುಟುಂಬಗಳಿಗೆ ಮನೆ ನಿರ್ಮಿಸಿಕೊಟ್ಟು ಅವರ ಬಾಳಿಗೆ ಬೆಳಕಾಗಿದ್ದಾರೆ. ಕನ್ನಡ ಪರ ಹೋರಾಟಗಳಲ್ಲಿ ಮುಂಚೂಣಿಯಲ್ಲಿ ಗುರುತಿಸಿಕೊಳ್ಳುತ್ತಿರುವ ಇವರು ಪ್ರಸ್ತುತ ಕನ್ನಡ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ನಡೆಯುತ್ತಿರುವ ಅಭಿಯಾನಕ್ಕೆ ನಾಯಕತ್ವ ಮತ್ತು ಮಾರ್ಗದರ್ಶನ ನೀಡಲು ಸಮಿತಿಯ ಗೌರವಾಧ್ಯಕ್ಷರಾಗಿ ಆಯ್ಕೆಗೊಂಡಿದ್ದಾರೆ.




