ಜನರ ಆಶೀರ್ವಾದ ಇರುವವರೆಗೆ ರಾಜಕೀಯದಲ್ಲಿರುತ್ತೇನೆ-ಸಿದ್ದರಾಮಯ್ಯ
ರಾಜಕಾರಣದಲ್ಲಿ ಇರಬೇಕಾದರೆ ಜನರ ಆಶೀರ್ವಾದ ಇರಬೇಕು. ಜನರ ಆಶೀರ್ವಾದದಿಂದ ಇಲ್ಲಿಯವರೆಗೂ ಸಾಗಿ ಬಂದಿದ್ದು, ಜನರ ಆಶೀರ್ವಾದ ಇರುವವರೆಗೆ ರಾಜಕೀಯದಲ್ಲಿರುತ್ತೇನೆ. ನನ್ನ ಆಡಳಿತ ತೃಪ್ತಿ ತಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಹಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮುಖ್ಯಮಂತ್ರಿಯಾಗಿ ದೀರ್ಘಾವಧಿ ಆಗಿದೆ. ಪೂರ್ಣಾವಧಿಯಾಗುತ್ತದೆಯೇ ಎಂಬ ಪ್ರಶ್ನೆಗೆ, ಅದನ್ನು ಪಕ್ಷದ ವರಿಷ್ಠರು ತೀರ್ಮಾನಿಸುತ್ತಾರೆ ಎಂದು ಪ್ರತಿಕ್ರಿಯಿಸಿದರು.
ಸಿದ್ದರಾಮಯ್ಯ ಅವರ ಸರಕಾರ ಬೊಕ್ಕಸ ಖಾಲಿ ಮಾಡಿದೆ ಎಂದು ಬಿಜೆಪಿಯವರು ಮಾಡಿರುವ ಟೀಕೆಗಳಿಗೆ ಪ್ರತಿಕ್ರಿಯೆ ನೀಡಿದ ಸಿಎಂ ಬಿಜೆಪಿಯವರಿಗೆ ಸುಳ್ಳು ಹೇಳುವುದೇ ಕೆಲಸ ಎಂದು ಹೇಳಿದರು.




