ಪೆರುವಾಯಿ: ಸೊಸೈಟಿ ಆವರಣದಿಂದ ದನ ಕಳ್ಳತನ ಪ್ರಕರಣ: ಆರೋಪಿಯ ಬಂಧನ

ವಿಟ್ಲ: ವಿಟ್ಲ ಪೊಲೀಸ್ ಠಾಣಾ ಸರಹದ್ದಿನ ಬಂಟ್ವಾಳ ತಾಲೂಕು ಪೆರುವಾಯಿ ಗ್ರಾಮದ ಸೊಸೈಟಿ ಆವರಣದಿಂದ 18-11-2025ರಂದು ಗಣೇಶ ರೈ ಹಾಗೂ ನಾರಾಯಣ ನಾಯ್ಕ ಎಂಬುವವರ 4 ದನಗಳು ಕಳ್ಳತನವಾಗಿದ್ದರ ಬಗ್ಗೆ ಗಣೇಶ ರೈ ಎಂಬುವವರು ನೀಡಿದ ದೂರಿನಂತೆ ವಿಟ್ಲ ಪೊಲೀಸ್ ಠಾಣಾ ಅ.ಕ್ರ 169/2025 ರಂತೆ ದೂರು ದಾಖಲಾಗಿದ್ದು ಈ ಬಗ್ಗೆ ತನಿಖೆ ನಡೆಸಲಾಗಿ ದಿನಾಂಕ:08-01-2026 ರಂದು ಪ್ರಕರಣದ ಆರೋಪಿಯಾದ ಮಂಗಳೂರು ಉಳ್ಳಾಲ ಗ್ರಾಮದ ಝುಲ್ಫಾನ್ ಮಾಲಿಕ್ ಉಳ್ಳಾಲ್( 30ವ)ನನ್ನು ಬಂಧಿಸಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.


