ಕರಾವಳಿಕ್ರೈಂರಾಜ್ಯ

ವಿಟ್ಲ: ಹಲ್ಲೆ, ದೊಂಬಿ,ಮಾದಕ ವಸ್ತು ಪ್ರಕರಣಗಳ ಆರೋಪಿ ಗಡಿಪಾರು

ವಿಟ್ಲ: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಹಲವು ಪ್ರಕರಣಗಳ ಆರೋಪಿ ಅಬ್ದುಲ್ ಖಾದರ್ ಶೌಕತ್ ಎಂಬಾತನನ್ನು ಗಡಿಪಾರು ಮಾಡಲಾಗಿದೆ.


ಬಂಟ್ವಾಳ ತಾಲೂಕು ವಿಟ್ಲ ಕಸಬ ಗ್ರಾಮ ನಿವಾಸಿ ಅಬ್ದುಲ್ ಖಾದರ್ ಶೌಕತ್ ಎಂಬಾತನ ಮೇಲೆ ಹಲ್ಲೆ ದೊಂಬಿ, ಮಾದಕ ದ್ರವ್ಯ ಸೇವನೆ, ಎನ್‌ಡಿಪಿಎಸ್ ಕಾಯ್ದೆಯಂತೆ 3 ಪ್ರಕರಣಗಳು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಈತನನ್ನು ವಿಟ್ಲ ಪೊಲೀಸ್ ಠಾಣೆಯ ಠಾಣಾಧಿಕಾರಿಗಳ ವರದಿಯಂತೆ ಸಹಾಯಕ ಆಯುಕ್ತರು ಹಾಗೂ ಉಪವಿಭಾಗೀಯ ದಂಡಾಧಿಕಾರಿ ಮಂಗಳೂರು ರವರು ದ.ಕ. ಜಿಲ್ಲೆಯಿಂದ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡಿ ಆದೇಶ ಹೊರಡಿಸಿದ್ದರು. ಅದರಂತೆ ಆರೋಪಿಯನ್ನು ಜ.8ರಂದು ಮೂಡಿಗೆರೆ ಪೊಲೀಸ್ ಠಾಣೆಗೆ ಕಳುಹಿಸಲಾಗಿದೆ ಎಂದು ಪೊಲೀಸ್ ಪ್ರಕಟನೆ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!