ನೆಲ್ಯಾಡಿ: ಬಾಲಕಿ ಮಾನಭಂಗ ಯತ್ನ, ಆರೋಪಿ ಬಂಧನ
ನೆಲ್ಯಾಡಿ: ಕೆಲ ದಿನದ ಹಿಂದೆ ನೆಲ್ಯಾಡಿ ಗ್ರಾಮದ ಕಟ್ಟೆಮಜಲು ಎಂಬಲ್ಲಿ ಅಪ್ರಾಪ್ತ ಬಾಲಕಿಯ ಮಾನಭಂಗ ಮಾಡಲು ಯತ್ನಿಸಿದ ಆರೋಪಿ ಚಂದ್ರಶೇಖರ ಕಟ್ಟೆಮಜಲು ಎಂಬಾತನನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಬಾಲಕಿ ಕುಟುಂಬದವರ ಜೊತೆಗೆ ಜ.3ರಂದು ರಾತ್ರಿ ನೆಲ್ಯಾಡಿ ಗ್ರಾಮದ ಕಟ್ಟೆಮಜಲು ಎಂಬಲ್ಲಿಗೆ ನೇಮೋತ್ಸವಕ್ಕೆ ಹೋಗಿದ್ದು, ಅಲ್ಲಿ ನೇಮೋತ್ಸವ ನೋಡುತ್ತಿದ್ದು, ಜ.4ರಂದು ಬೆಳಗಿನ ಜಾವ 3 ಗಂಟೆಗೆ ಬಹಿರ್ದೆಸೆಗೆಂದು ಹೋಗಿದ್ದ ವೇಳೆ ಸ್ಥಳೀಯ ನಿವಾಸಿ ಚಂದ್ರಶೇಖರ ಕಟ್ಟೆಮಜಲು ಎಂಬಾತ ಬಾಲಕಿಯ ಕೈಯನ್ನು ಹಿಡಿದು ಎಳೆದು ಮಾನಭಂಗ ಮಾಡಲು ಯತ್ನಿಸಿದ್ದ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಬಾಲಕಿಯ ತಂದೆ ನೀಡಿದ ದೂರಿನಂತೆ ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿರುವ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ತಿಳಿದು ಬಂದಿದೆ.




