ದೇವಸ್ಥಾನಕ್ಕೆ ಹೋದ ಬಾಲಕನ ಮೃತದೇಹ ಕೆರೆಯಲ್ಲಿ ಪತ್ತೆ
ಬೆಳ್ತಂಗಡಿ: ದೇವಸ್ಥಾನಕ್ಕೆ ಧನು ಪೂಜೆಗೆಂದು ಹೋದ ಬಾಲಕನೋರ್ವ ನಿಗೂಢವಾಗಿ ನಾಪತ್ತೆಯಾದ ಮತ್ತು ಬಳಿಕ ಮನೆಯ ಸಮೀಪದ ಕೆರೆಯಲ್ಲಿ ಆತನ ಮೃತದೇಹ ಪತ್ತೆಯಾದ ಘಟನೆ ಬೆಳ್ತಂಗಡಿ ತಾಲೂಕಿನ ಗೇರುಕಟ್ಟೆ ಬಳಿ ನಡೆದಿದೆ. ಮೃತದೇಹದ ಮೇಲೆ ಗಾಯಗಳಿದ್ದು ಈ ಹಿನ್ನೆಲೆಯಲ್ಲಿ ಬಾಲಕನ ಸಾವಿನ ಕುರಿತು ಅನುಮಾನಗಳು ಕೂಡಾ ವ್ಯಕ್ತವಾಗಿದೆ.

ಮೃತ ಬಾಲಕನನ್ನು ಗೇರುಕಟ್ಟೆ ಪ್ರೌಢ ಶಾಲೆಯ ವಿದ್ಯಾರ್ಥಿ ಸುಮಂತ್(15.ವ) ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಹಾಗೂ ಇತರ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ತನಿಖೆ ಮುಂದುವರಿದಿದೆ ಎಂದು ತಿಳಿದು ಬಂದಿದೆ.





