ಕರಾವಳಿಕ್ರೈಂ

ಬೆಳ್ತಂಗಡಿ: ಬಾಲಕನ ಮೃತದೇಹ ಕೆರೆಯಲ್ಲಿ ಪತ್ತೆ ಪ್ರಕರಣ, ಕೊಲೆ ಪ್ರಕರಣವಾಗಿ ಪರಿವರ್ತಿಸಿ ತನಿಖೆ ಆರಂಭಿಸಿದ ಪೊಲೀಸರು

ಬೆಳ್ತಂಗಡಿ: ಜ.14ರಂದು ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಒಡಿಲ್ನಾಳ ಗ್ರಾಮದ ಸಂಬೋಳ್ಯದ ಪ್ರಕರಣದಲ್ಲಿ ಮೃತ ಸುಮಂತ್‌ (15)ರವರ ಶವಪರೀಕ್ಷೆಯ ನಂತರ ಬಂದ ಪ್ರಾಥಮಿಕ ವರದಿಯ ಪ್ರಕಾರ, ಹುಡುಗನು ಕೆರೆಯಲ್ಲಿ ಮುಳುಗುವ ಸಮಯದಲ್ಲಿ ಜೀವಂತನಾಗಿದ್ದನು ಮತ್ತು ತಕ್ಷಣದ ಸಾವಿನ ಕಾರಣ ಮುಳುಗು ಸಾವಾಗಿರುತ್ತದೆ ಎಂದು ತಿಳಿಸಿದೆ.


ಪ್ರಾಥಮಿಕ ವರದಿ ತಲೆಯ ಮೇಲಿನ ಗಾಯಗಳು ಮಂದ ಬಲದ  ಗಾಯ (Blunt injury)  ಉಂಟಾಗಿವೆ ಮತ್ತು ಯಾವುದೇ ಚೂಪಾದ (Sharp) ಆಯುಧಗಳಿಂದ ಆಗಿರುವ ಗಾಯ ಅಲ್ಲ ಎಂದು ತಿಳಿದುಬಂದಿರುತ್ತದೆ.  ಆದರೆ ತಲೆಯ ಮೇಲಿನ ಗಾಯಗಳ ಬಗ್ಗೆ ಸಮರ್ಪಕವಾದ ವಿವರಣೆ ದೊರಕಿಲ್ಲ. ಆದ್ದರಿಂದ ಸಮಗ್ರ ಹಾಗೂ ಸೂಕ್ಷ್ಮ ತನಿಖೆ ನಡೆಸುವ ಉದ್ದೇಶದಿಂದ ಈ ಅಸಹಜ ಸಾವು ಪ್ರಕರಣವನ್ನು ಕೊಲೆ ಪ್ರಕರಣವಾಗಿ ಪರಿವರ್ತಿಸಿ ತನಿಖೆ ನಡೆಸಲಾಗುತ್ತಿದೆ.
ಈ ಪ್ರಕರಣದ ಸಮಗ್ರ ತನಿಖೆಗಾಗಿ ಬೆಳ್ತಂಗಡಿ ಡಿಎಸ್‌ಪಿ ರವರ ನೇತೃತ್ವದಲ್ಲಿ ನಾಲ್ಕು ತಂಡಗಳನ್ನು ರಚಿಸಲಾಗಿದೆ ಎಂದು ದಕ ಜಿಲ್ಲಾ ಎಸ್.ಪಿ ಮಾಹಿತಿ ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!