ಕರಾವಳಿ

ಬಂಟ್ವಾಳ: ತಂತಿ ಬೇಲಿಯಲ್ಲಿ ಸಿಲುಕಿಕೊಂಡಿದ್ದ ಚಿರತೆಯ ರಕ್ಷಣೆ

ಬಂಟ್ವಾಳ: ತಂತಿಬೇಲಿಗೆ ಸಿಲುಕಿಕೊಂಡಿದ್ದ ಚಿರತೆಯೊಂದನ್ನು ವೇಣೂರು ಅರಣ್ಯ ಇಲಾಖೆಯ ಅಧಿಕಾರಿಗಳ ತಂಡ ರಕ್ಷಣೆ ಮಾಡಿದ ಘಟನೆ ಪಿಲಾತಬೆಟ್ಟು ಎಂಬಲ್ಲಿ ಗುರುವಾರ ನಡೆದಿದೆ.


ಪಿಲಾತಬೆಟ್ಟು ಗ್ರಾಮದ ನಿನ್ಯಾಲು ಎಂಬಲ್ಲಿ ಗುರುವಾರ ಬೆಳಗ್ಗೆ ತಡೆ ಬೇಲಿಗೆ ಸಿಲುಕಿಕೊಂಡು ಒದ್ದಾಡುತ್ತಿದ್ದ ಚಿರತೆಯನ್ನು ನೋಡಿದ ಗ್ರಾಮಸ್ಥರು ನೀಡಿದ ಮಾಹಿತಿಯಂತೆ ವೇಣೂರು ಅರಣ್ಯ ಇಲಾಖಾ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದು, ಪಿಲಿಕುಲದ ವೈದ್ಯಾಧಿಕಾರಿ ಯಶಸ್ವಿ ನಾರಾವಿ ಚಿರತೆಗೆ ಅರಿವಳಿಕೆ ಚುಚ್ಚುಮದ್ದು ನೀಡಿದರು.


ಬಳಿಕ ಚಿರತೆಯನ್ನು ಸುರಕ್ಷಿತವಾಗಿ ವೇಣೂರು ಅರಣ್ಯ ಇಲಾಖೆಗೆ ಕೊಂಡೊಯ್ದು ಪ್ರಥಮ ಚಿಕಿತ್ಸೆ ನೀಡಲಾಗಿದೆ. ಸುಮಾರು ಒಂದುವರೆ ವರ್ಷದ ಹೆಣ್ಣು ಚಿರತೆ ಆರೋಗ್ಯವಾಗಿದೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!