ಪುನೀತ್ ಕೆರೆಹಳ್ಳಿ ಬಂಧನ
ಬೆಂಗಳೂರು: ವಲಸೆ ಕಾರ್ಮಿಕರ ಮನೆಗೆ ಅಕ್ರಮ ಪ್ರವೇಶ ಮಾಡಿ ಬೆದರಿಕೆ ಹಾಕಿರುವ ಆರೋಪದ ಮೇಲೆ ಪುನೀತ್ ಕೆರೆಹಳ್ಳಿ ಅವರನ್ನ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

ತಡರಾತ್ರಿ ಪುನೀತ್ ಕೆರೆಹಳ್ಳಿಯನ್ನು ಅವರ ಮನೆ ಬಳಿ ವಶಕ್ಕೆ ಪಡೆದ ಬನ್ನೇರುಘಟ್ಟ ಪೊಲೀಸರು, ಠಾಣೆಗೆ ಕರೆದುಕೊಂಡು ಹೋಗಿದ್ದಾರೆ ಎಂದು ತಿಳಿದು ಬಂದಿದೆ.
ವಲಸೆ ಕಾರ್ಮಿಕರ ವಾಸಸ್ಥಳಗಳಿಗೆ ಅಕ್ರಮವಾಗಿ ನುಗ್ಗಿ, ಅವರ ಪೌರತ್ವ ಹಾಗೂ ಗುರುತಿನ ದಾಖಲೆಗಳನ್ನು ಕೇಳಿ ಬೆದರಿಕೆ ಹಾಗೂ ಭೀತಿಯನ್ನುಂಟುಮಾಡುತ್ತಿದ್ದಾನೆ ಎಂಬ ಗಂಭೀರ ಆರೋಪ ವ್ಯಕ್ತವಾಗಿದ್ದು ಇದೀಗ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.



